ಸ್ಮಾರ್ಟ್ ಮೀಟರ್ ಉತ್ತಮ ಫಲಿತಾಂಶ: ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ
ದೇವನಹಳ್ಳಿ: ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಕೊಳವೆಬಾವಿಗಳಿಗೆ ಸ್ಮಾರ್ಟ್ ವಿದ್ಯುತ್ ಮೀಟರ್ ಹಾಗೂ ನೀರಿನ ಹರಿವಿನ ಪ್ರಮಾಣ ದಾಖಲಿಸುವ ವಾಲ್ಯೂಮೆಟ್ರಿಕ್ ಸಾಧನ ಅಳವಡಿಸಲು ಒತ್ತು ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಜಾರಿಗೊಳಿಸಿರುವ ಈ ವ್ಯವಸ್ಥೆ ಉತ್ತಮ ಫಲಿತಾಂಶ ನೀಡುತ್ತಿದ್ದು, ಅದರ ಕಾರ್ಯಕ್ಷಮತೆಯನ್ನು ಆಧಾರಿಸಿ ರಾಜ್ಯದ ಇತರ ಜಿಲ್ಲೆಗಳಿಗೂ ವಿಸ್ತರಿಸಲು ಪ್ರಯತ್ನಿಸಲಾ

ದೇವನಹಳ್ಳಿ: ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಕೊಳವೆಬಾವಿಗಳಿಗೆ ಸ್ಮಾರ್ಟ್ ವಿದ್ಯುತ್ ಮೀಟರ್ ಹಾಗೂ ನೀರಿನ ಹರಿವಿನ ಪ್ರಮಾಣ ದಾಖಲಿಸುವ ವಾಲ್ಯೂಮೆಟ್ರಿಕ್ ಸಾಧನ ಅಳವಡಿಸಲು ಒತ್ತು ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಜಾರಿಗೊಳಿಸಿರುವ ಈ ವ್ಯವಸ್ಥೆ ಉತ್ತಮ ಫಲಿತಾಂಶ ನೀಡುತ್ತಿದ್ದು, ಅದರ ಕಾರ್ಯಕ್ಷಮತೆಯನ್ನು ಆಧಾರಿಸಿ ರಾಜ್ಯದ ಇತರ ಜಿಲ್ಲೆಗಳಿಗೂ ವಿಸ್ತರಿಸಲು ಪ್ರಯತ್ನಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ತಿಳಿಸಿದರು.ತಾಲ್ಲೂಕಿನ ಕುಂದಾಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದ್ಯಾವರಹಳ್ಳಿ ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿ ಜಲಜೀವನ್ ಮಿಷನ್, ಸ್ವಚ್ಛ ಭಾರತ್ ಮಿಷನ್ ಹಾಗೂ ವಿವಿಧ ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲಿಸಿ ಮಾತನಾಡಿದರು.ಸ್ಮಾರ್ಟ್ ಮೀಟರ್ ಮೂಲಕ ಕೊಳವೆಬಾವಿಗಳಿಗೆ ಎಷ್ಟು ವಿದ್ಯುತ್ ಬಳಕೆಯಾಗುತ್ತಿದೆ ಎಂಬುದನ್ನು ನಿಖರವಾಗಿ ತಿಳಿಯಬಹುದು. ವಾಲ್ಯೂಮೆಟ್ರಿಕ್ ಸಾಧನಗಳು ಪ್ರತಿ ಗಂಟೆಗೆ ಎಷ್ಟು ಪ್ರಮಾಣದ ನೀರು ಸರಬರಾಜಾಗುತ್ತಿದೆ ಎಂಬ ಮಾಹಿತಿ ಒದಗಿಸುತ್ತವೆ. ಇದರಿಂದ ವಿದ್ಯುತ್ ಬಳಕೆಗೆ ಅನುಗುಣವಾಗಿ ನೀರು ಪೂರೈಕೆಯಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಲು ಸಾಧ್ಯವಾಗುತ್ತದೆ ಎಂದು ವಿವರಿಸಿದರು.ತಂತ್ರಜ್ಞಾನ ಆಧಾರಿತ ಮೇಲ್ವಿಚಾರಣೆಯಿಂದ ನೀರಿನ ವ್ಯರ್ಥ ನಿಯಂತ್ರಿಸುವುದರ ಜತೆಗೆ ಕೊಳವೆಬಾವಿಗಳ ಕಾರ್ಯನಿರ್ವಹಣೆ ಮತ್ತು ವಿದ್ಯುತ್ ವೆಚ್ಚದ ಬಗ್ಗೆ ನಿಖರ ಮಾಹಿತಿ ಪಡೆಯಬಹುದು. ಗ್ರಾಮ ಪಂಚಾಯಿತಿಗಳಿಗೆ ನೀರು ಸರಬರಾಜು ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಇದು ನೆರವಾಗಲಿದೆ ಎಂದು ತಿಳಿಸಿದರು.ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಸರಬರಾಜು ವ್ಯವಸ್ಥೆಗೆ ಆಧುನಿಕ ತಂತ್ರಜ್ಞಾನ ಅಳವಡಿಸುವುದರಿಂದ ವಿದ್ಯುತ್ ಬಳಕೆ, ನೀರಿನ ಪ್ರಮಾಣ ಹಾಗೂ ನಿರ್ವಹಣೆಯಲ್ಲಿ ಪಾರದರ್ಶಕತೆ ಇರುತ್ತದೆ. ಇದರಿಂದ ಅನಗತ್ಯ ವೆಚ್ಚ ತಗ್ಗಿಸುವ ಜತೆಗೆ ಸಾರ್ವಜನಿಕರಿಗೆ ಸಮರ್ಪಕವಾಗಿ ನೀರು ಪೂರೈಸಬಹುದು ಎಂದು ತಿಳಿಸಿದರು.ದ್ಯಾವರಹಳ್ಳಿಯ ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿಗಳು, ಮನೆಮನೆಗೆ ಅಳವಡಿಸಿರುವ ನಳ ಸಂಪರ್ಕಗಳು, ಪೈಪ್ಲೈನ್ಗಳು, ಮೇಲ್ಮಟ್ಟದ ನೀರಿನ ಟ್ಯಾಂಕ್ ಹಾಗೂ ನೀರು ಸರಬರಾಜು ವ್ಯವಸ್ಥೆಯನ್ನು ಪರಿಶೀಲಿಸಿದರು. ಕೆರೆ ಅಭಿವೃದ್ಧಿ ಮತ್ತು ಇತರ ಮೂಲಸೌಕರ್ಯ ಕಾಮಗಾರಿಗಳ ಪ್ರಗತಿಯನ್ನೂ ವೀಕ್ಷಿಸಿ, ಗ್ರಾಮಸ್ಥರಿಂದ ಮಾಹಿತಿ ಪಡೆದರು.ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತ ಬಿ. ಫೌಜಿಯಾ ತರನ್ನುಂ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವಾಸಂತಿ ಅಮರ್, ಉಪ ಕಾರ್ಯದರ್ಶಿ ಶಿವಕುಮಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎನ್. ಮುನಿರಾಜು, ಕಾರ್ಯಪಾಲಕ ಎಂಜಿನಿಯರ್ ಶ್ರೀಕಾಂತ್, ಎಂಜಿನಿಯರ್ಗಳಾದ ಸುನೀಲ್, ಭರತ್ ಕುಮಾರ್, ಬೆಸ್ಕಾಂ ಸಹಾಯಕ ಎಂಜಿನಿಯರ್ ಭರತಕುಮಾರ್, ಕುಂದಾಣ ಗ್ರಾಮ ಪಂಚಾಯಿತಿ ಪಿಡಿಒ ಕುಮಾರ್, ಸಿಬ್ಬಂದಿಯಾದ ಶಾಂತಕುಮಾರ್, ಸುರೇಶ್ ಹಾಗೂ ಇತರರು ಉಪಸ್ಥಿತರಿದ್ದರು.ಅನುದಾನ ಬಿಡುಗಡೆಗೆ ಕ್ರಮಗ್ರಾಮೀಣಾಭಿವೃದ್ಧಿ ಯೋಜನೆಗಳು, ಕುಡಿಯುವ ನೀರು ಪೂರೈಕೆ ಹಾಗೂ ಮೂಲಸೌಕರ್ಯ ಕಾಮಗಾರಿ ಪ್ರಗತಿ ಪರಿಶೀಲಿಸಲು ಈಗಾಗಲೇ ಐದಾರು ಜಿಲ್ಲೆಗಳಿಗೆ ಭೇಟಿ ನೀಡಲಾಗಿದೆ. ಈ ಹಿಂದೆ ತಾಂತ್ರಿಕ ಸಮಸ್ಯೆಗಳು ಮತ್ತು ವಿವಿಧ ಹಂತಗಳಲ್ಲಿ ಅನುದಾನ ಬಿಡುಗಡೆಯಾಗಬೇಕಿದ್ದ ಕಾರಣ ಕಾಮಗಾರಿಗಳ ಬಿಲ್ ಪಾವತಿಯಲ್ಲಿ ವಿಳಂಬವಾಗುತ್ತಿತ್ತು. ಇದೀಗ ನಿಗದಿತ ಅವಧಿಯಲ್ಲಿ ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ತಿಳಿಸಿದರು.ಪಂಕಜ್ ಕುಮಾರ್ ಪಾಂಡೆ, ಪ್ರಧಾನ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಸರಬರಾಜು ವ್ಯವಸ್ಥೆಗೆ ಆಧುನಿಕ ತಂತ್ರಜ್ಞಾನ ಅಳವಡಿಸುವುದರಿಂದ ವಿದ್ಯುತ್ ಬಳಕೆ, ನೀರಿನ ಪ್ರಮಾಣ ಹಾಗೂ ನಿರ್ವಹಣೆಯಲ್ಲಿ ಪಾರದರ್ಶಕತೆ ಇರುತ್ತದೆ. ಇದರಿಂದ ಅನಗತ್ಯ ವೆಚ್ಚ ತಗ್ಗಿಸುವ ಜತೆಗೆ ಸಾರ್ವಜನಿಕರಿಗೆ ಸಮರ್ಪಕವಾಗಿ ನೀರು ಪೂರೈಸಬಹುದು. 261105-15-98273041