ಕಾವೇರಿ ನೀರು ವಿವಾದ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು
ದೆಹಲಿ: ಕರ್ನಾಟಕವು ಈ ವರ್ಷ ಕಾವೇರಿ ನೀರು ಹರಿಸದ ಕಾರಣ 4 ಲಕ್ಷ ಹೆಕ್ಟೇರ್ ಕೃಷಿ ಭೂಮಿಯ ಬೆಳೆ ಹಾನಿಯಾಗಿದೆ. ಅಕ್ಟೋಬರ್ 23ರಿಂದ ಕಾವೇರಿ ಪ್ರಾಧಿಕಾರದ ಆದೇಶದಂತೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಿಲ್ಲ ಎಂದು ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್ನಲ್ಲಿ ಪ್ರಸ್ತಾಪಿಸಿದೆ.ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಪೀಠದ ಮುಂದೆ ತಮಿಳುನಾಡು ಪರ ವಕೀಲ ಕರುಣಾಕರನ

ದೆಹಲಿ: ಕರ್ನಾಟಕವು ಈ ವರ್ಷ ಕಾವೇರಿ ನೀರು ಹರಿಸದ ಕಾರಣ 4 ಲಕ್ಷ ಹೆಕ್ಟೇರ್ ಕೃಷಿ ಭೂಮಿಯ ಬೆಳೆ ಹಾನಿಯಾಗಿದೆ. ಅಕ್ಟೋಬರ್ 23ರಿಂದ ಕಾವೇರಿ ಪ್ರಾಧಿಕಾರದ ಆದೇಶದಂತೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಿಲ್ಲ ಎಂದು ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್ನಲ್ಲಿ ಪ್ರಸ್ತಾಪಿಸಿದೆ.ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಪೀಠದ ಮುಂದೆ ತಮಿಳುನಾಡು ಪರ ವಕೀಲ ಕರುಣಾಕರನ್ ಈ ವಿಚಾರ ಪ್ರಸ್ತಾಪಿಸಿದ್ದು, ಕಾವೇರಿ ನೀರು ಹರಿಸದ ಕಾರಣ 4 ಲಕ್ಷ ಹೆಕ್ಟೇರ್ ಕೃಷಿ ಭೂಮಿಗೆ ಹಾನಿಯಾಗಿದೆ ಎಂದು ಹೇಳಿದ್ದಾರೆ.ಕಾವೇರಿ ವಿವಾದದ ವಿಚಾರಣೆಯನ್ನು ತ್ವರಿತವಾಗಿ ಕೈಗೆತ್ತಿಕೊಳ್ಳುವಂತೆ ತಮಿಳುನಾಡು ಮನವಿ ಮಾಡಿದ್ದು, ಪರಿಶೀಲಿಸುವುದಾಗಿ ಮುಖ್ಯ ನ್ಯಾಯಮೂರ್ತಿಗಳ ಪೀಠ ಭರವಸೆ ನೀಡಿದೆ.ನಾಳೆ (ನವೆಂಬರ್ 6) ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಇಂದು (ಗುರುವಾರ) ಸುಪ್ರೀಂ ಕೋರ್ಟ್ನಲ್ಲಿ ತಮಿಳುನಾಡು ಸರ್ಕಾರದ ತುರ್ತು ಮನವಿ ಮಾಡಿದೆ.
Read the complete story at Prajavani