ಸರ್ಕಾರದಿಂದ ಪರಿಶಿಷ್ಟರ ಹಣ ದರ್ಬಳಕೆ: ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ
ದೇವನಹಳ್ಳಿ: ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಹಣವನ್ನು ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಂಡು ಬಡ ಸಮುದಾಯಗಳಿಗೆ ಅನ್ಯಾಯ ಮಾಡಿದೆ ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಎಸ್ಟಿ ಘಟಕ ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಬುಧವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ, ನೂತನ ಪದಾಧಿಕಾರಿಗಳ

ದೇವನಹಳ್ಳಿ: ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಹಣವನ್ನು ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಂಡು ಬಡ ಸಮುದಾಯಗಳಿಗೆ ಅನ್ಯಾಯ ಮಾಡಿದೆ ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಎಸ್ಟಿ ಘಟಕ ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಬುಧವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ, ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟ ಎಸ್ಸಿಎಸ್ಪಿ, ಟಿಎಸ್ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುವುದರಿಂದ ಸಮುದಾಯಗಳ ಶೈಕ್ಷಣಿಕ ಹಾಗೂ ಆರ್ಥಿಕ ಪ್ರಗತಿಗೆ ಹಿನ್ನಡೆಯಾಗುತ್ತದೆ. ಸರ್ಕಾರವು ಬಡ ಸಮುದಾಯಗಳ ಕಲ್ಯಾಣಕ್ಕೆ ಮೀಸಲಿಟ್ಟ ಹಣವನ್ನು ಅದೇ ಉದ್ದೇಶಕ್ಕೆ ವಿನಿಯೋಗಿಸಬೇಕು ಎಂದು ಒತ್ತಾಯಿಸಿದರು.ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಇಡೀ ಮಾನವಕುಲಕ್ಕೆ ಆದರ್ಶವಾಗಿದೆ. ಆದರೆ, ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅಭಿವೃದ್ಧಿ ನಿಗಮದ ಹಣವನ್ನು ಸಮುದಾಯದ ಕಲ್ಯಾಣಕ್ಕೆ ಬಳಸದೆ ತೆಲಂಗಾಣ ಚುನಾವಣೆಗೆ ದುರ್ಬಳಕೆ ಮಾಡಲಾಗಿದೆ ಎಂಬ ಗಂಭೀರ ಆರೋಪಗಳಿವೆ. ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದ ಸತ್ಯಾಂಶ ಹೊರಬರಬೇಕು. ನಿಗಮದ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಸಮರ್ಪಕ ಉತ್ತರ ನೀಡಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಜೆಡಿಎಸ್ ಎಸ್ಟಿ ಘಟಕದ ತಾಲ್ಲೂಕು ಅಧ್ಯಕ್ಷ ಮಾಳಿಗೇನಹಳ್ಳಿ ವೆಂಕಟೇಶ್ ಮೂರ್ತಿ, ‘ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳು ಕೇವಲ ಜಯಂತಿ ಆಚರಣೆಗೆ ಸೀಮಿತವಾಗಬಾರದು. ಅವರ ಜೀವನದ ಮೌಲ್ಯಗಳನ್ನು ಯುವಜನರಿಗೆ ಪರಿಚಯಿಸುವುದರ ಜತೆಗೆ ಸಮುದಾಯದ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಎಲ್ಲರೂ ಸಹಕಾರ ನೀಡಬೇಕು’ ಮನವಿ ಮಾಡಿದರು.ಎಸ್ಟಿ ಘಟಕದ ನೂತನ ಪದಾಧಿಕಾರಿಗಳು ತಮ್ಮ ಸ್ಥಾನಮಾನಕ್ಕೆ ಸೀಮಿತವಾಗದೆ ಗ್ರಾಮಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸಬೇಕು. ಜನರ ಸಮಸ್ಯೆಗಳನ್ನು ಗುರುತಿಸಿ ಪರಿಹಾರಕ್ಕೆ ಪ್ರಯತ್ನಿಸಬೇಕು. ಸಮುದಾಯದ ಅಭಿವೃದ್ಧಿಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂಬ ಹೇಳಿದರು.ಕಾರ್ಯಕ್ರಮದಲ್ಲಿ ಜೆಡಿಎಸ್ ಎಸ್ಟಿ ಘಟಕದ ನೂತನ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು. ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ವಿ. ಮಂಜುನಾಥ್, ತಾಲ್ಲೂಕು ಅಧ್ಯಕ್ಷ ಎಸ್. ಮಹೇಶ್, ತಾಲ್ಲೂಕು ಗೌರವಾಧ್ಯಕ್ಷ ಸಂಪಂಗಪ್ಪ, ಪ್ರಧಾನ ಕಾರ್ಯದರ್ಶಿ ಮನೋಹರ್, ಕಾರ್ಯಾಧ್ಯಕ್ಷ ಜಿ.ಎ. ರವೀಂದ್ರ, ಪಟ್ಟಣ ಘಟಕ ಅಧ್ಯಕ್ಷ ಮುನಿನಂಜಪ್ಪ, ಯುವ ಘಟಕ ಅಧ್ಯಕ್ಷ ಟಿ. ರವಿ, ಉಪನ್ಯಾಸಕ ಕೃಷ್ಣಪ್ಪ, ಎಸ್ಸಿ ಘಟಕ ಜಿಲ್ಲಾಧ್ಯಕ್ಷ ನಾಗರಾಜ್, ತಾಲ್ಲೂಕು ಉಪಾಧ್ಯಕ್ಷ ಶಿವಣ್ಣ, ಮುಖಂಡರಾದ ರಾಮಣ್ಣ, ಗುರುಪ್ಪ, ಶಾಮಣ್ಣ, ವಿಜಯಪುರ ಶ್ರೀರಾಮಣ್ಣ, ಚಂದ್ರಶೇಖರ್, ಮಂಡಿಬೆಲೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಅಂಬಿಕಾ, ಪುರಸಭೆ ಮಾಜಿ ಸದಸ್ಯ ರಾಮು, ಶ್ರೀನಿವಾಸ್, ನಾರಾಯಣಸ್ವಾಮಿ, ವೀರಭದ್ರಪ್ಪ, ವೆಂಕಟರಾಜು ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಮುದಾಯದ ಮುಖಂಡರು ಭಾಗವಹಿಸಿದ್ದರು.261105-15-1705446773