ನಂಜನಗೂಡಿನ ಆಕಳ ಗ್ರಾಮದಲ್ಲಿ 4 ಹುಲಿಗಳ ಓಡಾಟ – ಸ್ಥಳೀಯರಲ್ಲಿ ಮನೆ ಮಾಡಿದ ಆತಂಕ
ಮೈಸೂರು: ನಂಜನಗೂಡು (Nanjangud) ತಾಲೂಕಿನ ಆಕಳ ಗ್ರಾಮದ ಸುತ್ತಮುತ್ತ ಹುಲಿಗಳ ಆತಂಕ ಮತ್ತಷ್ಟು ಹೆಚ್ಚಾಗಿದೆ. ಒಂದಲ್ಲ, ಎರಡಲ್ಲ, ಬರೋಬ್ಬರಿ ನಾಲ್ಕು ಹುಲಿಗಳು (Tiger) ಒಂದೇ ಪ್ರದೇಶದಲ್ಲಿ ಕಾಣಿಸಿಕೊಂಡಿವೆ. ಅರಣ್ಯ ಇಲಾಖೆ ನಡೆಸಿದ ಡ್ರೋನ್ ಕ್ಯಾಮರಾ ಕಾರ್ಯಾಚರಣೆಯಲ್ಲಿ ನಾಲ್ಕು ಹುಲಿಗಳು ಪತ್ತೆಯಾಗಿವೆ. ಕಳೆದ ಎರಡು ದಿನಗಳ ಹಿಂದಷ್ಟೇ ಗ್ರಾಮದ ಪರಮೇಶ್ ಎಂಬುವವರ ಮೇಲ

ಮೈಸೂರು: ನಂಜನಗೂಡು (Nanjangud) ತಾಲೂಕಿನ ಆಕಳ ಗ್ರಾಮದ ಸುತ್ತಮುತ್ತ ಹುಲಿಗಳ ಆತಂಕ ಮತ್ತಷ್ಟು ಹೆಚ್ಚಾಗಿದೆ. ಒಂದಲ್ಲ, ಎರಡಲ್ಲ, ಬರೋಬ್ಬರಿ ನಾಲ್ಕು ಹುಲಿಗಳು (Tiger) ಒಂದೇ ಪ್ರದೇಶದಲ್ಲಿ ಕಾಣಿಸಿಕೊಂಡಿವೆ. ಅರಣ್ಯ ಇಲಾಖೆ ನಡೆಸಿದ ಡ್ರೋನ್ ಕ್ಯಾಮರಾ ಕಾರ್ಯಾಚರಣೆಯಲ್ಲಿ ನಾಲ್ಕು ಹುಲಿಗಳು ಪತ್ತೆಯಾಗಿವೆ. ಕಳೆದ ಎರಡು ದಿನಗಳ ಹಿಂದಷ್ಟೇ ಗ್ರಾಮದ ಪರಮೇಶ್ ಎಂಬುವವರ ಮೇಲೆ ಹುಲಿ ದಾಳಿ ನಡೆಸಿತ್ತು. ಇದರ ಬೆನ್ನಲ್ಲೇ ಡೋರನಕಟ್ಟೆ ಕಾಲೋನಿಯಲ್ಲಿ ಮಹಿಳೆಯೊಬ್ಬರನ್ನು ಹುಲಿ ಕೊಂದಿತ್ತು. ಸರಣಿ ದಾಳಿಗಳಿಂದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದು, ಹುಲಿಗಳನ್ನು ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಹುಲಿ – ನಿಟ್ಟುಸಿರು ಬಿಟ್ಟ ರೈತರು ಕಾರ್ಯಾಚರಣೆ ಚುರುಕುಗೊಳಿಸಿರುವ ಅರಣ್ಯ ಇಲಾಖೆ (Forest Department), ಡ್ರೋನ್ ಕ್ಯಾಮೆರಾಗಳ ಮೂಲಕ ಹುಲಿಗಳ ಚಲನವಲನದ ಮೇಲೆ ನಿಗಾ ಇರಿಸಿದೆ. ರಾತ್ರಿ ವೇಳೆ ಡ್ರೋನ್ ಕ್ಯಾಮೆರಾ ಕಣ್ಣಿಗೆ ಒಂದೇ ಪ್ರದೇಶದಲ್ಲಿ ನಾಲ್ಕು ಹುಲಿಗಳು ಸೆರೆಯಾಗಿವೆ. ನಾಲ್ಕು ಹುಲಿಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದೆ. ಇದನ್ನೂ ಓದಿ: ಚಾ.ನಗರ | ರೈತನ ಕೊಂದಿದ್ದ ಹುಲಿ ಕೊನೆಗೂ ಸೆರೆ