ವೈದ್ಯಕೀಯ ವೃತ್ತಿ ಜನಸೇವೆಗಿರುವ ಅವಕಾಶ: ಸಚಿವ ಡಾ. ಅಜಯ್ ಸಿಂಗ್
ಬೀದರ್: ‘ವೈದ್ಯ ವೃತ್ತಿಯು ಜನ ಸೇವೆಗಿರುವ ಅವಕಾಶ. ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಸಿಂಗ್ ಹೇಳಿದರು.ಇಲ್ಲಿನ ಪ್ರತಾಪ್ ನಗರದಲ್ಲಿ ಬುಧವಾರ ನಡೆದ ಶ್ರೀ ಸಿದ್ಧರಾಮೇಶ್ವರ ಆಯುರ್ವೇದಿಕ್ ವೈದ್ಯಕೀಯ ಕಾಲೇಜು, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಘಟಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನ

ಬೀದರ್: ‘ವೈದ್ಯ ವೃತ್ತಿಯು ಜನ ಸೇವೆಗಿರುವ ಅವಕಾಶ. ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಸಿಂಗ್ ಹೇಳಿದರು.ಇಲ್ಲಿನ ಪ್ರತಾಪ್ ನಗರದಲ್ಲಿ ಬುಧವಾರ ನಡೆದ ಶ್ರೀ ಸಿದ್ಧರಾಮೇಶ್ವರ ಆಯುರ್ವೇದಿಕ್ ವೈದ್ಯಕೀಯ ಕಾಲೇಜು, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಘಟಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.ವೈದ್ಯಕೀಯ ಪದವಿ ಪೂರೈಸಿದವರು ಭವಿಷ್ಯದಲ್ಲಿ ಶ್ರೇಷ್ಠ ವೈದ್ಯರಾಗಲು ಪ್ರಯತ್ನಿಸಬೇಕು. ಜೀವನದಲ್ಲಿ ನಿರ್ದಿಷ್ಟ ಗುರಿ ಇಟ್ಟುಕೊಳ್ಳಬೇಕು. ಆದರೆ, ಅದನ್ನು ಬೇಗ ತಲುಪುವ ಧಾವಂತದಲ್ಲಿ ನಮ್ಮವರನ್ನು ಕಳೆದುಕೊಳ್ಳಬಾರದು. ಸಂಬಂಧ ಹಾಗೂ ಮಾನವೀಯ ಮೌಲ್ಯಗಳನ್ನು ಉಳಿಸಿಕೊಳ್ಳುವ ಜತೆಗೆ ಗುರಿಯೆಡೆಗೆ ಸಾಗಬೇಕು ಎಂದು ಸಲಹೆ ಮಾಡಿದರು.ಸಾನ್ನಿಧ್ಯ ವಹಿಸಿದ್ದ ಮುಗಳಖೋಡ-ಜಿಡಗಾ ಮಠದ ಪೀಠಾಧಿಪತಿ ಮುರುಘರಾಜೇಂದ್ರ ಸ್ವಾಮೀಜಿ ಮಾತನಾಡಿ, ‘ಸಿದ್ಧರಾಮೇಶ್ವರ ಆಯರ್ವೇದಿಕ್ ವೈದ್ಯಕೀಯ ಕಾಲೇಜು ಗುಣಮಟ್ಟದ ಶಿಕ್ಷಣದಿಂದಾಗಿ ಹೆಸರು ಮಾಡಿದೆ. ಕಾಲೇಜಿನಲ್ಲಿ ಓದಿದ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ವೈದ್ಯರಾಗಿ, ಉಜ್ವಲ ಭವಿಷ್ಯ ಕಟ್ಟಿಕೊಂಡಿದ್ದಾರೆ’ ಎಂದು ಹೇಳಿದರು.ಯಲ್ಲಾಲಿಂಗ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಮುರಳಿಧರ ಎಕಲಾರಕರ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ವೆಂಕಟೇಶ್ ಎಕಲಾರಕರ್, ಕಾಲೇಜಿನ ವೈದ್ಯಕೀಯ ಅಧೀಕ್ಷಕ ಡಾ. ರಾಜಕುಮಾರ ಡೊಂಗರೆ, ಉಪ ಪ್ರಾಚಾರ್ಯ ಡಾ. ಎಂ.ಡಿ. ಅಲ್ತಾಫ್, ಸಂಸದ ಸಾಗರ್ ಖಂಡ್ರೆ, ಶಾಸಕ ರಹೀಂ ಖಾನ್, ಬೆಂಗಳೂರಿನ ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಇಂಡಿಯನ್ ಸಿಸ್ಟಮ್ ಆಫ್ ಮೆಡಿಸಿನ್ ಡೀನ್ ಡಾ. ಸಂಜಯ್ ಕೆ.ಎಸ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಅಬ್ದುಲ್ ಮನ್ನಾನ್ ಸೇಠ್, ವಿಧಾನ ಪರಿಷತ್ ಮಾಜಿ ಸದಸ್ಯ ಅರವಿಂದಕುಮಾರ ಅರಳಿ ಇದ್ದರು.ಡಾ. ಮಮತಾ ಎಕಲಾರಕರ್ ಕಾಲೇಜಿನ ಪರಿಚಯ ನೀಡಿದರು. ಪ್ರಾಚಾರ್ಯ ಡಾ. ರೂಪೇಶ್ ಎಕಲಾರಕರ್ ಸ್ವಾಗತಿಸಿದರು.261105-33-1004213284