ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತರ ಪ್ರತಿಭಟನೆ: ರಾಷ್ಟ್ರೀಯ ಹೆದ್ದಾರಿ ಬಂದ್
ಬೆಳಗಾವಿ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ಗುರುವಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ರಾಜ್ಯ ರೈತ ಸಂಘದ ಅಧ್ಯಕ್ಷ ಚೂನಪ್ಪ ಪೂಜೇರಿ ಅವರನ್ನು ಪೊಲೀಸರು ವಶಕ್ಕೆ ಪಡೆದ ಬೆನ್ನಲ್ಲೇ ಬೆಳಗಾವಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.ಕರಗುಪ್ಪಿ– ಪಾಶ್ಚಾಪುರ ರಸ್ತೆಯಲ್ಲಿ ಪೊಲೀಸರ ವ

ಬೆಳಗಾವಿ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ಗುರುವಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ರಾಜ್ಯ ರೈತ ಸಂಘದ ಅಧ್ಯಕ್ಷ ಚೂನಪ್ಪ ಪೂಜೇರಿ ಅವರನ್ನು ಪೊಲೀಸರು ವಶಕ್ಕೆ ಪಡೆದ ಬೆನ್ನಲ್ಲೇ ಬೆಳಗಾವಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.ಕರಗುಪ್ಪಿ– ಪಾಶ್ಚಾಪುರ ರಸ್ತೆಯಲ್ಲಿ ಪೊಲೀಸರ ವಾಹನಕ್ಕೆ ಅಡ್ಡಿಇನ್ನೊಂದೆಡೆ, ಕರಗುಪ್ಪಿ– ಪಾಶ್ಚಾಪುರ ರಸ್ತೆಯ ಮಧ್ಯೆ ರೈತರು ಪ್ರತಿಭಟನೆ ನಡೆಸಿ ಪೊಲೀಸರ ವಾಹನಕ್ಕೆ ಅಡ್ಡಲಾಗಿ ಬೇಲಿ ಹಾಕಿ ತಡೆದರು. ಪ್ರತಿಭಟನಾಕಾರರನ್ನು ಮೀಸಲು ಪೊಲೀಸ್ ಪಡೆ ವಾಹನದಲ್ಲಿ ಗೋಕಾಕ ಗುಡ್ಡದ ಕಡೆಗೆ ಕರೆದೊಯ್ಯುತ್ತಿದ್ದಾಗ ರೈತರು ವಾಹನವನ್ನು ತಡೆದರು.ವಾಹನದಲ್ಲಿ ಕರೆದೊಯ್ಯುವ ಸಂದರ್ಭದಲ್ಲಿ ಪ್ರತಿಭಟನಾಕಾರರಿಗೆ ಕುಡಿಯಲು ನೀರು ನೀಡದೆ ಸತಾಯಿಸಲಾಗುತ್ತಿದೆ ಎಂದು ರೈತರು ಆರೋಪಿಸಿದರು. ಅಸ್ವಸ್ಥಗೊಂಡ ಪ್ರತಿಭಟನಾಕಾರರಿಗೆ ಬಸಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು.ಮುನವಳ್ಳಿಯಲ್ಲಿ ಟೈರ್ ಸುಟ್ಟು ಹೆದ್ದಾರಿ ಬಂದ್: ಚೂನಪ್ಪ ಪೂಜೇರಿ ಬಂಧನ ಖಂಡಿಸಿ ಸವದತ್ತಿ ತಾಲೂಕಿನ ಮುನವಳ್ಳಿಯಲ್ಲಿ ರೈತರು ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಗೋಕಾಕ–ಸವದತ್ತಿ ಸಂಪರ್ಕಿಸುವ ಪ್ರಮುಖ ರಸ್ತೆಯಲ್ಲಿ ಟೈರ್ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.ಯರಗಟ್ಟಿಯಲ್ಲೂ ರಸ್ತೆ ತಡೆ: ಯರಗಟ್ಟಿ ಪಟ್ಟಣದಲ್ಲಿಯೂ ರೈತರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ಬೆಳಗಾವಿ–ಬಾಗಲಕೋಟೆ ಸಂಪರ್ಕಿಸುವ ಪ್ರಮುಖ ರಸ್ತೆಯನ್ನು ಬಂದ್ ಮಾಡಿ, ರಸ್ತೆಯ ಮಧ್ಯೆಯೇ ಟೈರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.ಕಾಗವಾಡ ತಾಲ್ಲೂಕಿನಾದ್ಯಂತ ಭುಗಿಲೆದ್ದ ರೈತರ ಆಕ್ರೋಶಕಾಗವಾಡ ತಾಲ್ಲೂಕಿನಾದ್ಯಂತ ಕಬ್ಬಿಗೆ ಯೋಗ್ಯ ಬೆಲೆ ನೀಡಬೇಕು ಹಾಗೂ ರೈತ ಮುಖಂಡ ಚೂನಪ್ಪ ಪೂಜೇರಿ, ಶಶಿಕಾಂತ ಪಡಸಲಗಿ ಬಂಧನ ಖಂಡಿಸಿ ತಾಲ್ಲೂಕಿನ ಪ್ರಮುಖ ಹೆದ್ದಾರಿಗಳನ್ನು ಬಂದ್ ಮಾಡಿ ರೈತ ಆಕ್ರೋಶ ವ್ಯಕ್ತಪಡಿಸಿದರು.ತಾಲ್ಲೂಕಿನ ಐನಾಪೂರ, ಉಗಾರ,ಕಾಗವಾಡ ಪಟ್ಟಣ ಕವಲಗುಡ್ಡ ಗ್ರಾಮದ ಜೇವರ್ಗಿ-ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ ರೈತ ಮುಖಂಡರಾದ ಚೂನಪ್ಪ ಪೂಜಾರಿ ಹಾಗೂ ಶಶಿಕಾಂತ ಪೂಜಾರಿ ಅವರನ್ನು ಬಂಧನ ಖಂಡಿಸಿ ಮತ್ತು ಕಬ್ಬಿಗೆ ಬೆಲೆ ಘೋಷಣೆ ಮಾಡುವಂತೆ ಆಗ್ರಹಿಸಿ ಟೈರ್ ಗೆ ಬೆಂಕಿ ಹಚ್ಚಿ ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರುಈ ವೇಳೆ ಕಾಗವಾಡದಲ್ಲಿ ರೈತ ಮುಖಂಡ ಗಿರಿಮಲ್ಲಪ್ಪ ಅಥಣಿ ಮಾತನಾಡಿ ರೈತರು ನ್ಯಾಯಯುತವಾಗಿ ಹೋರಾಟ ಮಾಡುತ್ತಾ ಬಂದರು ರಾಜ್ಯ ಸರ್ಕಾರ ರೈತ ಮುಖಂಡರನ್ನು ಬಂಧಿಸಿ ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡಲಾಗುತ್ತಿದೆ ನಮ್ಮ ಬೇಡಿಕೆ ಈಡಿಯೇರಿಕೆ ಆಗುವ ವರಗೆ ಹೋರಾಟದಿಂದ ಹಿಂದೆ ಸರಿಯುವುದಿಲ್ಲಾ ಎಂದು ಹೇಳಿದರು.ಪ್ರತಿಭಟನೆಯಿಂದ ಮಹಾರಾಷ್ಟ್ರ ರಾಜ್ಯದ ಮಿರಜ ರಸ್ತೆಯಲ್ಲಿ ಸಾವಿರಾರು ವಾಹನ ನಿಂತಿದ್ದು ಪ್ರಯಾಣಿಕರು ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸಿದರು.