ಎಲ್ಲ ವಸ್ತುಗಳ ಬೆಲೆ ಏರಿಕೆಗೆ ಬಿಜೆಪಿ ಕಾರಣ: ಸಚಿವ ಈಶ್ವರ ಬಿ. ಖಂಡ್ರೆ
ಬೀದರ್: ‘ಎಲ್ಲ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಗೆ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವೇ ಕಾರಣ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಕೆಕೆಆರ್ಡಿಬಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡ ನಂತರ ಪತ್ರಕರ್ತರು, ಹಾಲಿನ ದರ, ಬಸ್ ಟಿಕೆಟ್ ದರ ಹೆಚ್ಚಿಸಿರುವುದನ್ನು ವಿರೋಧಿಸಿ ಬಿಜೆಪಿ

ಬೀದರ್: ‘ಎಲ್ಲ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಗೆ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವೇ ಕಾರಣ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಕೆಕೆಆರ್ಡಿಬಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡ ನಂತರ ಪತ್ರಕರ್ತರು, ಹಾಲಿನ ದರ, ಬಸ್ ಟಿಕೆಟ್ ದರ ಹೆಚ್ಚಿಸಿರುವುದನ್ನು ವಿರೋಧಿಸಿ ಬಿಜೆಪಿಯವರು ಪ್ರತಿಭಟನೆ ನಡೆಸಿರುವ ಕುರಿತು ಕೇಳಿದಾಗ ಮೇಲಿನಂತೆ ಪ್ರತಿಕ್ರಿಯಿಸಿದರು.13 ಸಲ ಪೆಟ್ರೋಲ್, ಡೀಸೆಲ್ ಹಾಗೂ ಗೃಹಬಳಕೆಯ ಸಿಲಿಂಡರ್ ದರವನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ. ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿರುವುದರಿಂದ ಅನಿವಾರ್ಯವಾಗಿ ನಾವು ಬಸ್ ಟಿಕೆಟ್ ದರ ಹೆಚ್ಚಳ ಮಾಡಿದ್ದೇವೆ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.ಹಾಲಿನ ದರ ಹೆಚ್ಚಿಸಿರುವುದರಿಂದ ರೈತರು ಸ್ವಾಗತಿಸಿದ್ದಾರೆ. ಸ್ವತಃ ಅನೇಕ ಜನ ರೈತರೇ ಈ ವಿಷಯ ನನ್ನೊಂದಿಗೆ ಹಂಚಿಕೊಂಡಿದ್ದಾರೆ. ಕಬ್ಬಿನ ಬೆಂಬಲ ಬೆಲೆ ನಿಗದಿಪಡಿಸುವುದು, ಎಫ್ಆರ್ಪಿ ನಿಗದಿ ವಿಚಾರ ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದೆ. ನಿಜವಾಗಿಯೂ ರೈತರ ಬಗ್ಗೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರ ಉತ್ತಮ ಬೆಲೆ ಕೊಡಬೇಕೆಂದು ಆಗ್ರಹಿಸಿದರು.ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು. ಜನರ ನಡುವೆ ಜಗಳ ಸೃಷ್ಟಿಸಿ, ಬೆಂಕಿ ಹಚ್ಚುವುದು ಬಿಜೆಪಿಯವರ ಕೆಲಸ. ನಮ್ಮದೇನಿದ್ದರೂ ಜನಪರ ಕಾರ್ಯ. ನಮ್ಮ ಐದು ಗ್ಯಾರಂಟಿಗಳಿಂದ ರಾಜ್ಯದ ಜನ ಸಂತೃಪ್ತರಾಗಿದ್ದಾರೆ ಎಂದರು.ಇಡೀ ದೇಶದಲ್ಲಿ ಹೆಚ್ಚಿನ ಜಿಎಸ್ಟಿ, ತೆರಿಗೆ ಕರ್ನಾಟಕದಿಂದ ಕೇಂದ್ರಕ್ಕೆ ಹೋಗುತ್ತಿದೆ. ಕೇಂದ್ರ ಸರ್ಕಾರ ಉತ್ತರ ಪ್ರದೇಶ, ಬಿಹಾರಕ್ಕೆ ಸಾಕಷ್ಟು ಅನುದಾನ ಕೊಡುತ್ತಿದೆ. ಆದರೆ, ಕರ್ನಾಟಕದ ವಿಚಾರದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಇದು ಕರ್ನಾಟಕಕ್ಕೆ ಮಾಡುತ್ತಿರುವ ಅನ್ಯಾಯವಲ್ಲವೇ ಎಂದು ಪ್ರಶ್ನಿಸಿದರು.