ಬೇಯರ್ ಕಂಪನಿ ₹200 ಕೋಟಿ ಹೂಡಿಕೆ: ಒಪ್ಪಂದಕ್ಕೆ ಸಹಿ
ಬೆಂಗಳೂರು: ಆರೋಗ್ಯ ಸೇವೆ ಮತ್ತು ಕೃಷಿ ಕ್ಷೇತ್ರಗಳಲ್ಲಿ ಜಾಗತಿಕ ಮಟ್ಟ ಕಂಪನಿಯಾಗಿರುವ ಜರ್ಮನಿ ಮೂಲದ ಬೇಯರ್ ಸೈನ್ಸ್ ಅಂಡ್ ಇನ್ನೋವೇಶನ್ ಬೆಂಗಳೂರು ಸಮೀಪ ತನ್ನ ಅತ್ಯಾಧುನಿಕ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ₹200 ಕೋಟಿ ಹೂಡಿಕೆ ಮಾಡಲಿದೆ.ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರ ಸಮ್ಮುಖದಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್

ಬೆಂಗಳೂರು: ಆರೋಗ್ಯ ಸೇವೆ ಮತ್ತು ಕೃಷಿ ಕ್ಷೇತ್ರಗಳಲ್ಲಿ ಜಾಗತಿಕ ಮಟ್ಟ ಕಂಪನಿಯಾಗಿರುವ ಜರ್ಮನಿ ಮೂಲದ ಬೇಯರ್ ಸೈನ್ಸ್ ಅಂಡ್ ಇನ್ನೋವೇಶನ್ ಬೆಂಗಳೂರು ಸಮೀಪ ತನ್ನ ಅತ್ಯಾಧುನಿಕ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ₹200 ಕೋಟಿ ಹೂಡಿಕೆ ಮಾಡಲಿದೆ.ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರ ಸಮ್ಮುಖದಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್ ಮತ್ತು ಬೇಯರ್ ಕಂಪನಿಯ ಸಿಎಫ್ಒ ವಿನೀತ್ ಜಿಂದಾಲ್ ಅವರು ಒಡಂಬಡಿಗೆ ಸಹಿ ಹಾಕಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಪಾಟೀಲ, ‘ಕಂಪನಿಯು ಮುಂದಿನ ವರ್ಷದ ಏಪ್ರಿಲ್ ತಿಂಗಳಲ್ಲಿ ನಡೆಯುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೂ ಮೊದಲೇ ಯೋಜನೆಯ ಭೂಮಿಪೂಜೆ ನೆರವೇರಿಸಲು ಬಯಸಿದ್ದು, ತ್ವರಿತವಾಗಿ ತಯಾರಿಕಾ ಚಟುವಟಿಕೆಗಳನ್ನು ಆರಂಭಿಸಲು ಉತ್ಸುಕವಾಗಿದೆ’ ಎಂದರು.ಕಂಪನಿಯು ಈಗಾಗಲೇ ಬೆಂಗಳೂರಿನಲ್ಲಿ ತನ್ನ ಸೇವಾ ಮತ್ತು ನಾವೀನ್ಯತೆಯ ಹಬ್ ಹಾಗೂ ಚಾಮರಾಜ ನಗರದಲ್ಲಿ ಬೆಳೆ ಪರೀಕ್ಷಾ ಕೇಂದ್ರವನ್ನು ಹೊಂದಿದೆ. ಭಾರತದಲ್ಲಿ ಇದು 125 ವರ್ಷಗಳಿಂದಲೂ ಇದ್ದು 11 ಸಾವಿರ ಜನರಿಗೆ ಕೆಲಸ ಕೊಟ್ಟಿದೆ. ದೇಶದಲ್ಲಿ ಬೇಯರ್ ಕಂಪನಿಯು 7 ಉತ್ಪಾದನಾ ಸ್ಥಾವರಗಳು ಮತ್ತು 3 ಜಿಇಸಿ ಕೇಂದ್ರಗಳನ್ನು ಹೊಂದಿದೆ ಎಂದು ಅವರು ಹೇಳಿದರು.ಈ ಸಂದರ್ಭದಲ್ಲಿ ಕೈಗಾರಿಕಾ ಇಲಾಖೆ ಆಯುಕ್ತೆ ಖುಷ್ಬೂ ಗೋಯಲ್ ಚೌಧರಿ, ಕೆಐಎಡಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಇದ್ದರು.ಎಂ.ಬಿ. ಪಾಟೀಲ ಬೃಹತ್ ಕೈಗಾರಿಕಾ ಸಚಿವಬೇಯರ್ ಕಂಪನಿಯು ಮುಂದಿನ 7 ವರ್ಷಗಳಲ್ಲಿ ಹಂತಹಂತವಾಗಿ ಈ ಹೂಡಿಕೆ ಮಾಡಲಿದೆ. ಇದರಿಂದ 220 ಉದ್ಯೋಗಗಳು ಸೃಷ್ಟಿಯಾಗಲಿವೆ