ಅಂಬೇಡ್ಕರ್ ವಿರುದ್ಧ ಪೋಸ್ಟ್: ಆರೋಪಿಗೆ ₹25 ಸಾವಿರ ದಂಡ ವಿಧಿಸಿದ ಹೈಕೋರ್ಟ್
ಬೆಂಗಳೂರು: ಬಿ.ಆರ್.ಅಂಬೇಡ್ಕರ್ ಮತ್ತು ಗೃಹ ಸಚಿವ ಪ್ರಿಯಾಂಕ ಖರ್ಗೆ ಅವರ ಜಾತಿಯನ್ನು ಉಲ್ಲೇಖಿಸಿ ಅವಹೇಳನಕಾರಿ ಪದಗಳಲ್ಲಿ ಫೇಸ್ಬುಕ್ನಲ್ಲಿ ಸಂದೇಶವೊಂದನ್ನು ಪೋಸ್ಟ್ ಮಾಡಿ ಪ್ರಕಟಿಸಿದ ಆರೋಪ ಹೊತ್ತ ವ್ಯಕ್ತಿಯೊಬ್ಬರ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ನಿರಾಕರಿಸಿರುವ ಹೈಕೋರ್ಟ್, ಆರೋಪಿಗೆ ₹25 ಸಾವಿರ ದಂಡ ವಿಧಿಸಿ ಆದೇಶಿಸಿದೆ.‘ನನ್ನ ವಿರುದ್ಧದ ದೋಷಾರೋ
ಬೆಂಗಳೂರು: ಬಿ.ಆರ್.ಅಂಬೇಡ್ಕರ್ ಮತ್ತು ಗೃಹ ಸಚಿವ ಪ್ರಿಯಾಂಕ ಖರ್ಗೆ ಅವರ ಜಾತಿಯನ್ನು ಉಲ್ಲೇಖಿಸಿ ಅವಹೇಳನಕಾರಿ ಪದಗಳಲ್ಲಿ ಫೇಸ್ಬುಕ್ನಲ್ಲಿ ಸಂದೇಶವೊಂದನ್ನು ಪೋಸ್ಟ್ ಮಾಡಿ ಪ್ರಕಟಿಸಿದ ಆರೋಪ ಹೊತ್ತ ವ್ಯಕ್ತಿಯೊಬ್ಬರ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ನಿರಾಕರಿಸಿರುವ ಹೈಕೋರ್ಟ್, ಆರೋಪಿಗೆ ₹25 ಸಾವಿರ ದಂಡ ವಿಧಿಸಿ ಆದೇಶಿಸಿದೆ.‘ನನ್ನ ವಿರುದ್ಧದ ದೋಷಾರೋಪ ಪಟ್ಟಿ ರದ್ದುಪಡಿಸಬೇಕು’ ಎಂದು ಕೋರಿ ಮಂಡ್ಯದ ಮಹೇಶ್ ಕೆ.ಸಿ ಅಲಿಯಾಸ್ ಮಹೇಶ್ ಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.ರಾಜ್ಯದ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದ್ದ ಎಂ.ವಿ.ಅನೂಪ್ ಕುಮಾರ್ ಅವರ ವಾದವನ್ನು ಮನ್ನಿಸಿರುವ ನ್ಯಾಯಪೀಠ, ‘ಅರ್ಜಿದಾರರ ವಿರುದ್ಧದ ಆರೋಪಗಳು ವಿಚಾರಣೆಗೆ ಅರ್ಹವಾಗಿವೆ ಮತ್ತು ಕ್ರಿಮಿನಲ್ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಲು ಯಾವುದೇ ಆಧಾರಗಳಿಲ್ಲ’ ಎಂದು ಅಭಿಪ್ರಾಯಪಟ್ಟಿದೆ.ಅರ್ಜಿದಾರ ಆರೋಪಿಗೆ ₹25 ಸಾವಿರ ದಂಡ ವಿಧಿಸಲಾಗಿದ್ದು, ‘ಈ ಮೊತ್ತವನ್ನು ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪಾವತಿಸಬೇಕು’ ಎಂದು ಆದೇಶಿಸಲಾಗಿದೆ.ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪದಾಧಿಕಾರಿ ಎಸ್.ವಿಜಯಕುಮಾರ್ ನೀಡಿದ್ದ ದೂರಿನ ಆಧಾರದಡಿ ಮಹೇಶ್ ವಿರುದ್ಧ ಮೈಸೂರು ದಕ್ಷಿಣ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು.