‘ಮುರಸು’ ಚಂಡಮಾರುತಕ್ಕೆ ₹1919 ಕೋಟಿಗೂ ಅಧಿಕ ನಷ್ಟ: ಸಿಎಂ ಚಂದ್ರಬಾಬು ನಾಯ್ಡು
ಅಮರಾವತಿ (ಆಂಧ್ರಪ್ರದೇಶ): ಸಮುದ್ರ ತೀರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ನಾಪತ್ತೆಯಾಗಿದ್ದ ತಮಿಳುನಾಡಿನ ಒಂಬತ್ತು ಮೀನುಗಾರರ ಪೈಕಿ ಏಳು ಮಂದಿ ಮೃತಪಟ್ಟಿದ್ದಾರೆ. ಇನ್ನಿಬ್ಬರಿಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡ ‘ಮುರಸು’ ಚಂಡಮಾರುತವು ಆಂಧ್ರಪ್ರದೇಶ ಕರಾವಳಿ

ಅಮರಾವತಿ (ಆಂಧ್ರಪ್ರದೇಶ): ಸಮುದ್ರ ತೀರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ನಾಪತ್ತೆಯಾಗಿದ್ದ ತಮಿಳುನಾಡಿನ ಒಂಬತ್ತು ಮೀನುಗಾರರ ಪೈಕಿ ಏಳು ಮಂದಿ ಮೃತಪಟ್ಟಿದ್ದಾರೆ. ಇನ್ನಿಬ್ಬರಿಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡ ‘ಮುರಸು’ ಚಂಡಮಾರುತವು ಆಂಧ್ರಪ್ರದೇಶ ಕರಾವಳಿ ತೀರದ ಮೇಲೆ ಅಪ್ಪಳಿಸಿ ಮೀನುಗಾರರು ಮೃತಪಟ್ಟಿದ್ದಾರೆ. ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿರುವ ಇನ್ನಿಬ್ಬರಿಗಾಗಿ ಹುಡುಕಾಟ ನಡೆಸಲು ಸೂಚಿಸಲಾಗಿದೆ. ಮೀನುಗಾರರ ದೋಣಿಯು ಪ್ರಕಾಶಂ ಜಿಲ್ಲೆಯ ಕೊತ್ತಪಟ್ನಂ ಸಮುದ್ರ ತೀರಕ್ಕೆ ಬಂದು ತಲುಪಿದೆ ಎಂದು ಅವರು ತಿಳಿಸಿದ್ದಾರೆ.ಮೃತಪಟ್ಟರ ಮರಣೋತ್ತರ ಪರೀಕ್ಷೆ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಅವರ ಊರುಗಳಿಗೆ ಮೃತದೇಹಗಳನ್ನು ಸಾಗಿಸಲು ವ್ಯವಸ್ಥೆ ಮಾಡುವಂತೆ ನಾಯ್ಡು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಚಂಡಮಾರುತದಿಂದ ಸುಮಾರು ₹1,919 ಕೋಟಿಗೂ ಅಧಿಕ ನಷ್ಟವಾಗಿದೆ. ಮಳೆ– ಬಿರುಗಾಳಿಯಿಂದ ರಾಜ್ಯದ 15 ಜಿಲ್ಲೆಗಳ 52,459 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆಗಳಿಗೆ ಹಾನಿಯಾಗಿದೆ. 312ಮನೆಗಳು ಜಖಂಗೊಂಡಿದ್ದು, ಸಂತ್ರಸ್ತರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.