ಮಕ್ಕಳ ಸುರಕ್ಷತೆ ಕುರಿತು ಜಾಲತಾಣಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು: ಕೇಂದ್ರ
ನವದೆಹಲಿ: ಸಾಮಾಜಿಕ ಜಾಲತಾಣಗಳು ತಮ್ಮ ಕಂಟೆಂಟ್ನ ಸಂಪೂರ್ಣ ಜವಾಬ್ದಾರಿಯನ್ನು ಹೊರಬೇಕು. ಜಾಲತಾಣಗಳಲ್ಲಿ ಮಕ್ಕಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನ್ ವೈಷ್ಣವ್ ಹೇಳಿದ್ದಾರೆ. ಅಂತರ್ಜಾಲ, ಸಾಮಾಜಿಕ ಜಾಲತಾಣಗಳ ವ್ಯಾಪ್ತಿ ಮತ್ತು ಸ್ವರೂಪವು ಸಂಪೂರ್ಣವಾಗಿ ಬದಲಾಗಿದೆ. ಸಾಮಾಜಿಕ ಜ

ನವದೆಹಲಿ: ಸಾಮಾಜಿಕ ಜಾಲತಾಣಗಳು ತಮ್ಮ ಕಂಟೆಂಟ್ನ ಸಂಪೂರ್ಣ ಜವಾಬ್ದಾರಿಯನ್ನು ಹೊರಬೇಕು. ಜಾಲತಾಣಗಳಲ್ಲಿ ಮಕ್ಕಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನ್ ವೈಷ್ಣವ್ ಹೇಳಿದ್ದಾರೆ. ಅಂತರ್ಜಾಲ, ಸಾಮಾಜಿಕ ಜಾಲತಾಣಗಳ ವ್ಯಾಪ್ತಿ ಮತ್ತು ಸ್ವರೂಪವು ಸಂಪೂರ್ಣವಾಗಿ ಬದಲಾಗಿದೆ. ಸಾಮಾಜಿಕ ಜಾಲತಾಣಗಳ ವೇದಿಕೆಗಳು ಮಕ್ಕಳ ಸುರಕ್ಷತೆ, ಮಹಿಳೆಯರ ರಕ್ಷಣೆ, ಡಿಜಿಟಲ್ ಅರೆಸ್ಟ್ ಹಾಗೂ ನಾಗರಿಕರಿಗೆ ಉಂಟಾಗುವ ಹಾನಿಗಳ ಕುರಿತು ಹೆಚ್ಚಿನ ಜವಾಬ್ದಾರಿ ವಹಿಸಿಕೊಳ್ಳುವುದು ಅಗತ್ಯವಾಗಿದೆ. ನಮ್ಮ ಸಮಾಜಕ್ಕೆ ಸುರಕ್ಷಿತ ವಾತಾವರಣ ನಿರ್ಮಿಸಲು ಸಂಸ್ಥೆಗಳು ಸ್ವಯಂಪ್ರೇರಿತ ಮತ್ತು ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಆಲ್ಗರಿದಮ್ನ ಪಾರದರ್ಶಕತೆಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಮತ್ತು ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ನೇರವಾಗಿ ಬಗೆಹರಿಸಿಕೊಳ್ಳಲು ವೇದಿಕೆಯನ್ನು ಒದಗಿಸಬೇಕು ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿನ ಯಾವುದಾದರೂ ವಿಷಯವು ನಾಗರಿಕರಿಗೆ ತೊಂದರೆ ಅಥವಾ ಹಾನಿ ಉಂಟುಮಾಡಿದರೆ, ಅವರಿಗೆ ನ್ಯಾಯಾಲಯ ಅಥವಾ ಪೊಲೀಸರ ಬಳಿಗೆ ಹೋಗುವುದು ಒಂದೇ ಆಯ್ಕೆಯಾಗಿದೆ. ಹೀಗಾಗದಂತೆ ನಾಗರಿಕರು ತಮ್ಮ ಕುಂದುಕೊರತೆಗಳನ್ನು ಸುಲಭವಾಗಿ ವ್ಯಕ್ತಪಡಿಸಿ ಬಗೆಹರಿಸಿಕೊಳ್ಳಲು ಅತ್ಯಂತ ಪರಿಣಾಮಕಾರಿ ವ್ಯವಸ್ಥೆ ರಚಿಸಬೇಕಾಗಿದೆ ಎಂದು ಹೇಳಿದ್ದಾರೆ.