ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಯೋಜನೆ: ಸಿಎಂ ವಿಜಯ್ ಆದೇಶ
ಚೆನ್ನೈ: ಕಾಲೇಜು ವಿದ್ಯಾರ್ಥಿಗಳಿಗಾಗಿ 'ವೆಟ್ರಿ ಲ್ಯಾಪ್ಟಾಪ್ ಯೋಜನೆ'ಯನ್ನು ಜಾರಿಗೆ ತರಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ. ಈ ಯೋಜನೆ ಅನುಷ್ಠಾನಕ್ಕೆ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಆದೇಶಿಸಿದ್ದಾರೆ. ಇದಕ್ಕಾಗಿ ₹2,000 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ. 2026–27ನೇ ಸಾಲಿನ ಬಜೆಟ್ನಲ್ಲಿ ಘೋಷಿಸಿದ್ದ

ಚೆನ್ನೈ: ಕಾಲೇಜು ವಿದ್ಯಾರ್ಥಿಗಳಿಗಾಗಿ 'ವೆಟ್ರಿ ಲ್ಯಾಪ್ಟಾಪ್ ಯೋಜನೆ'ಯನ್ನು ಜಾರಿಗೆ ತರಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ. ಈ ಯೋಜನೆ ಅನುಷ್ಠಾನಕ್ಕೆ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಆದೇಶಿಸಿದ್ದಾರೆ. ಇದಕ್ಕಾಗಿ ₹2,000 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ. 2026–27ನೇ ಸಾಲಿನ ಬಜೆಟ್ನಲ್ಲಿ ಘೋಷಿಸಿದ್ದ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡುವ ಯೋಜನೆ ಜಾರಿಗೊಳಿಸಲು ಮುಖ್ಯಮಂತ್ರಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಈ ಯೋಜನೆಯಡಿ ಸರ್ಕಾರಿ, ಅನುದಾನಿತ ಕಾಲೇಜುಗಳಲ್ಲಿ ವೈದ್ಯಕೀಯ, ಕೃಷಿ, ಕಾನೂನು ಸೇರಿದಂತೆ ವಿವಿಧ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ ಹಾಗೂ ದ್ವಿತೀಯ ವರ್ಷದ ಪದವಿ, ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Read the complete story at Prajavani