ದೀಪಾವಳಿ ಜಾತ್ರೆ – ನ.11ರವರೆಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆ, ಪಾದಯಾತ್ರೆ ನಿಷೇಧ
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwar Hills) ನಡೆಯಲಿರುವ ದೀಪಾವಳಿ (Deepawali) ಹಬ್ಬದ ಜಾತ್ರಾ ಮಹೋತ್ಸವ ಪ್ರಯುಕ್ತ ಅಧಿಕ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಹೀಗಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ನ.11ರವರೆಗೆ ಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆ, ಪಾದಯಾತ್ರೆಯನ್ನು ನಿಷೇಧಿಸಿ ಡಿಸಿ ಆದೇಶ ಹೊರಡಿಸಿದ್ದಾರೆ. ದೀಪಾವಳಿ (Deepawali) ಹ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwar Hills) ನಡೆಯಲಿರುವ ದೀಪಾವಳಿ (Deepawali) ಹಬ್ಬದ ಜಾತ್ರಾ ಮಹೋತ್ಸವ ಪ್ರಯುಕ್ತ ಅಧಿಕ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಹೀಗಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ನ.11ರವರೆಗೆ ಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆ, ಪಾದಯಾತ್ರೆಯನ್ನು ನಿಷೇಧಿಸಿ ಡಿಸಿ ಆದೇಶ ಹೊರಡಿಸಿದ್ದಾರೆ. ದೀಪಾವಳಿ (Deepawali) ಹಬ್ಬದ ಜಾತ್ರೆಗೆ ಭಕ್ತಾಧಿಗಳು ಜಿಲ್ಲೆ, ಹೊರ ಜಿಲ್ಲೆ ಮತ್ತು ಹೊರ ರಾಜ್ಯದಿಂದ ಲಕ್ಷಾಂತರ ಮಂದಿ ಕಾಲ್ನಡಿಗೆಯಲ್ಲಿ ಆಗಮಿಸುತ್ತಾರೆ. ಈ ಸಮಯದಲ್ಲಿ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಕಾಡು ಪ್ರಾಣಿಗಳಿಂದ ಆಗುವ ದಾಳಿ ಹಾಗೂ ಅನಾಹುತಗಳನ್ನು ತಡೆಗಟ್ಟಲು ಸಾರ್ವಜನಿಕರ ಹಿತದೃಷ್ಠಿಯಿಂದ ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟಕ್ಕೆ ಇಂದಿನಿಂದ ನ.11ರವರೆಗೆ ಸಂಜೆ 6ರಿಂದ ಬೆಳಿಗ್ಗೆ 7ಗಂಟೆಯವರೆಗೆ ಭಕ್ತಾಧಿಗಳು, ಸಾರ್ವಜನಿಕರು ಪಾದಯಾತ್ರೆ, ಕಾಲ್ನಡಿಗೆ ಮೂಲಕ ತೆರಳುವುದನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ಆದೇಶಿಸಿದ್ದಾರೆ. ಇದನ್ನೂ ಓದಿ: ನಿನ್ನೆವರೆಗೂ 18 ಲಕ್ಷ ಜನರಿಂದ ಹಾಸನಾಂಬ ದೇವಿ ದರ್ಶನ – ಟಿಕೆಟ್, ಲಾಡು ಮಾರಾಟದಿಂದ 17 ಕೋಟಿಗೂ ಅಧಿಕ ಆದಾಯ ಕಳೆದ ಬಾರಿ ಪಾದಯಾತ್ರೆ ವೇಳೆ ಚಿರತೆ ದಾಳಿ ನಡೆಸಿ ಮಂಡ್ಯ ಮೂಲದ ಪಾದಯಾತ್ರಿ ಸಾವನ್ನಪ್ಪಿದ್ದರು. ಅಲ್ಲದೇ ಚನ್ನಪಟ್ಟಣ ಮೂಲದ ಬಾಲಕನಿಗೆ ಗಾಯವಾಗಿತ್ತು. ನಂತರ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಹೋಗುತ್ತಿದ್ದ ಬಾಲಕನನ್ನು ಚಿರತೆ ಕೊಂದು ಹಾಕಿತ್ತು. ಇದೆಲ್ಲದರಿಂದ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ,ಪ್ರಾಧಿಕಾರ ಹಾಗೂ ಅರಣ್ಯ ಇಲಾಖೆ ಇದೀಗ ಪಾದಯಾತ್ರೆಗೆ ಬ್ರೇಕ್ ಹಾಕಿದೆ.