ಮೇಕೆದಾಟು ಯೋಜನೆಗೆ ಅನುಮೋದನೆ ನೀಡಬೇಡಿ: ಪ್ರಧಾನಿ ಮೋದಿಗೆ ವಿಜಯ್ ಮನವಿ
ಚೆನ್ನೈ: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿರುವುದಕ್ಕೆ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಶನಿವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ವಿಜಯ್, ಕಾವೇರಿ ನದಿಗೆ ಅಡ್ಡಲಾಗಿ ಅಂತರರಾಜ್ಯ ಗಡಿಯ ಸಮೀಪ 67.16 ಟಿಎಂಸಿ ಅಡಿ ಸಾಮರ್ಥ್ಯದ ಬೃಹತ

ಚೆನ್ನೈ: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿರುವುದಕ್ಕೆ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಶನಿವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ವಿಜಯ್, ಕಾವೇರಿ ನದಿಗೆ ಅಡ್ಡಲಾಗಿ ಅಂತರರಾಜ್ಯ ಗಡಿಯ ಸಮೀಪ 67.16 ಟಿಎಂಸಿ ಅಡಿ ಸಾಮರ್ಥ್ಯದ ಬೃಹತ್ ಜಲಾಶಯ ನಿರ್ಮಿಸುವ ಕರ್ನಾಟಕದ ಪ್ರಸ್ತಾವನೆಯನ್ನು ವಿರೋಧಿಸಿದ್ದಾರೆ.ಮೇಕೆದಾಟು ಯೋಜನೆ ಜಾರಿಯಾದರೆ ತಮಿಳುನಾಡಿಗೆ ಹರಿದುಬರುವ ಕಾವೇರಿ ನೀರಿನ ಪ್ರಮಾಣಕ್ಕೆ ತಡೆಯುಂಟಾಗಲಿದೆ. ಅಲ್ಲದೆ, ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯಕ್ಕೆ ಪ್ರತಿ ತಿಂಗಳು ತಲುಪಬೇಕಾದ ನೀರಿನ ಹಂಚಿಕೆಯ ಮೇಲೂ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.ಸ್ಥಳ ಪರಿಶೀಲನೆಯ ಬಳಿಕ ಕೈಗೊಳ್ಳಬಹುದಾದ ಮುಂದಿನ ಆಡಳಿತಾತ್ಮಕ ಹಾಗೂ ತಾಂತ್ರಿಕ ಕ್ರಮಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ವಿಜಯ್ ಒತ್ತಾಯಿಸಿದ್ದಾರೆ.ಕಾವೇರಿ ನದಿ ನೀರು ಹಂಚಿಕೆಯಲ್ಲಿ ಪಾಲುದಾರರಾಗಿರುವ ಇತರ ರಾಜ್ಯಗಳ ಒಪ್ಪಿಗೆ ಇಲ್ಲದೆ ಮೇಕೆದಾಟು ಯೋಜನೆಗೆ ಯಾವುದೇ ಕಾನೂನುಬದ್ಧ ಅಥವಾ ಆಡಳಿತಾತ್ಮಕ ಅನುಮೋದನೆ ನೀಡಬಾರದು ಎಂದು ಅವರು ಪ್ರಧಾನಿ ಅವರಿಗೆ ಮನವಿ ಮಾಡಿದ್ದಾರೆ.ಕಾವೇರಿ ಜಲಾನಯನ ಪ್ರದೇಶದ ಎಲ್ಲ ಪಾಲುದಾರ ರಾಜ್ಯಗಳ ಒಪ್ಪಿಗೆ ಪಡೆಯುವವರೆಗೆ ಮೇಕೆದಾಟು ಯೋಜನೆಯನ್ನು ಮುಂದುವರಿಸದಂತೆ ಕರ್ನಾಟಕ ಸರ್ಕಾರಕ್ಕೆ ಸೂಕ್ತ ಸೂಚನೆ ನೀಡಬೇಕು ಎಂದೂ ಪತ್ರದಲ್ಲಿ ಆಗ್ರಹಿಸಿದ್ದಾರೆ.