ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು ಕಾಡಾನೆ ಸಾವು
ಶಿವಮೊಗ್ಗ: ತಾಲೂಕಿನ ಹಾಯ್ಹೊಳೆ ಸಮೀಪದ ಈಚಲವಾಡಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು ಕಾಡಾನೆಯೊಂದು ಮೃತಪಟ್ಟಿದೆ.ಶನಿವಾರ ಘಟನೆ ಬೆಳಕಿಗೆ ಬಂದಿದೆ. ಪಕ್ಕದ ಭದ್ರಾ ಅಭಯಾರಣ್ಯದಿಂದ ಬಂದ ಸಲಗ ಜಮೀನಿನಲ್ಲಿ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದ ಪರಿಣಾಮ ವಿದ್ಯುತ್ ಶಾಕ್ಗೆ ಬಲಿಯಾಗಿದೆ. ಕಾಡುಪ್ರಾಣಿಗಳ ಶಿಕಾರ

ಶಿವಮೊಗ್ಗ: ತಾಲೂಕಿನ ಹಾಯ್ಹೊಳೆ ಸಮೀಪದ ಈಚಲವಾಡಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು ಕಾಡಾನೆಯೊಂದು ಮೃತಪಟ್ಟಿದೆ.ಶನಿವಾರ ಘಟನೆ ಬೆಳಕಿಗೆ ಬಂದಿದೆ. ಪಕ್ಕದ ಭದ್ರಾ ಅಭಯಾರಣ್ಯದಿಂದ ಬಂದ ಸಲಗ ಜಮೀನಿನಲ್ಲಿ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದ ಪರಿಣಾಮ ವಿದ್ಯುತ್ ಶಾಕ್ಗೆ ಬಲಿಯಾಗಿದೆ. ಕಾಡುಪ್ರಾಣಿಗಳ ಶಿಕಾರಿಗಾಗಿ ವಿದ್ಯುತ್ ತಂತಿ ಅಳವಡಿಸಿರಬಹುದು ಎಂದು ಶಂಕಿಸಲಾಗಿದೆ.ಶಂಕರ ವಲಯ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಸ್ಥಳಕ್ಕೆ ಧಾವಿಸಿ ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.
Read the complete story at Prajavani