2029ರವರೆಗೆ ಕಾಯಿರಿ, ರಾಹುಲ್ ಗಾಂಧಿ ಪ್ರಧಾನಿ ಆಗುವುದು ಖಚಿತ: ಅಮಿತ್ ಶಾಗೆ ಕೆ.ಸಿ.ವೇಣುಗೋಪಾಲ್ ತಿರುಗೇಟು
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು 2029ರಲ್ಲಿ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ (KC Venugopal) ಗೃಹ ಸಚಿವ ಅಮಿತ್ ಶಾ (Amit Shah) ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ರಾಹುಲ್ ಗಾಂಧಿ ಅವರು ಅಣಕು ಸಂಸತ್ತಿನಲ್ಲಿ ಮಾತ್ರ ಪ್ರಧಾನಿಯಾಗಬಹುದು ಎಂಬ ಅಮಿತ್ ಶಾ ಹೇಳಿಕೆ ಕುರಿತ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು 2029ರಲ್ಲಿ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ (KC Venugopal) ಗೃಹ ಸಚಿವ ಅಮಿತ್ ಶಾ (Amit Shah) ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ರಾಹುಲ್ ಗಾಂಧಿ ಅವರು ಅಣಕು ಸಂಸತ್ತಿನಲ್ಲಿ ಮಾತ್ರ ಪ್ರಧಾನಿಯಾಗಬಹುದು ಎಂಬ ಅಮಿತ್ ಶಾ ಹೇಳಿಕೆ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, 2029ರವರೆಗೆ ಕಾಯುವಂತೆ ಸವಾಲು ಹಾಕಿದ್ದಾರೆ. ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಮುಂದೆ ಏನಾಗಲಿದೆ ಎಂಬುದನ್ನು ಅವರೇ ಯೋಚಿಸಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ತಂದೆಯ ತಿಥಿ ಕಾರ್ಯಕ್ಕೆ ಸಾಕ್ಷಿ ಪ್ರದೋಷ್ಗೆ ಕೋರ್ಟ್ 5 ದಿನ ಷರತ್ತುಬದ್ಧ ಅನುಮತಿ ಅಮಿತ್ ಶಾ ಅವರೇ, ಸ್ವಲ್ಪ ಸಮಯ ಕಾಯಿರಿ. ನಮ್ಮ ಮಾತನ್ನು ನೆನಪಿಟ್ಟುಕೊಳ್ಳಿ. ರಾಹುಲ್ ಗಾಂಧಿ ಭಾರತದ ಪ್ರಧಾನಿಯಾಗಲಿದ್ದಾರೆ. 2029ರವರೆಗೆ ಕಾಯಿರಿ. ದೇಶದ ಜನರು ರಾಹುಲ್ ಗಾಂಧಿ ಪ್ರಧಾನಿಯಾಗಬೇಕೆಂದು ಬಯಸುತ್ತಿದ್ದಾರೆ. ಆದರೆ, ಅವರ ಹೋರಾಟ ಕೇವಲ ಪ್ರಧಾನಿ ಹುದ್ದೆಗಾಗಿ ಅಲ್ಲ. ದೇಶದಲ್ಲಿ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸುವುದು, ಸಾಮಾನ್ಯ ಜನರ ಮತದಾನದ ಹಕ್ಕುಗಳನ್ನು ರಕ್ಷಿಸುವುದು ಮತ್ತು ಸಂವಿಧಾನವನ್ನು ಎತ್ತಿಹಿಡಿಯುವುದೇ ಇಂಡಿಯಾ ಮೈತ್ರಿಕೂಟದ ಪ್ರಮುಖ ಉದ್ದೇಶ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಒಂದೇ ಕುಟುಂಬದ ಏಳು ಜನರ ನರಮೇಧ – ಶವದ ವಾಸನೆ ಬರದಂತೆ 10 ಲೇಯರ್ ಟೇಪ್ ಸುತ್ತಿದ್ದ ಪಾಪಿ ಇತ್ತೀಚೆಗೆ ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಮೈತ್ರಿಕೂಟ ಬೃಹತ್ ಪ್ರತಿಭಟನೆ ನಡೆಸಿತ್ತು. ಎಸ್ಐಆರ್ ಪ್ರಕ್ರಿಯೆಯನ್ನು ಹಿಂಪಡೆಯಬೇಕು ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಮೈತ್ರಿಕೂಟದ ನಾಯಕರು ಆಗ್ರಹಿಸಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಮತಗಳ್ಳತನದ ಆರೋಪವನ್ನೂ ಮಾಡಿದ್ದ ಕಾಂಗ್ರೆಸ್ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಪಕ್ಷಗಳು, ಚುನಾವಣಾ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿದ್ದವು. ಇದನ್ನೂ ಓದಿ: ಕಳೆದ 6 ತಿಂಗಳಲ್ಲಿ 7ನೇ ದಾಳಿ – ಕೋಲ್ಕತ್ತಾ ಮನೆಯ ಮೇಲಿನ ದಾಳಿಗೆ ಬಿಜೆಪಿ ಕಾರಣ: ಅಭಿಷೇಕ್ ಬ್ಯಾನರ್ಜಿ ಆರೋಪ ಇಂಡಿಯಾ ಮೈತ್ರಿಕೂಟದ ಮುಂದಿನ ನಡೆ ಏನು? ಇಂಡಿಯಾ ಮೈತ್ರಿಕೂಟದ ಮುಂದಿನ ಹೋರಾಟದ ಕುರಿತು ಮಾತನಾಡಿದ ಕೆ.ಸಿ. ವೇಣುಗೋಪಾಲ್, ಕಾಂಗ್ರೆಸ್ ತನ್ನ ಮಿತ್ರಪಕ್ಷಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ತಿಳಿಸಿದ್ದಾರೆ. ದೇಶದ ವಿವಿಧ ರಾಜ್ಯಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವುದರ ಜೊತೆಗೆ ರಾಷ್ಟ್ರಮಟ್ಟದಲ್ಲಿಯೂ ಪ್ರತಿಭಟನೆಗಳನ್ನು ಮುಂದುವರಿಸಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: 10 ದಿನಗಳಲ್ಲಿ 6 ಅಡಿ ಕುಸಿತ, 98 ಅಡಿಗೆ ಇಳಿದ ಕೆಆರ್ಎಸ್ ನೀರಿನ ಮಟ್ಟ – ಸಂಕಷ್ಟದಲ್ಲಿ ಅನ್ನದಾತ ನಾವು ಪ್ರತಿಭಟನೆಗೆ ಕರೆ ನೀಡಿದಾಗ ಕೇವಲ ಪಕ್ಷದ ಕಾರ್ಯಕರ್ತರು ಮಾತ್ರವಲ್ಲದೆ, ವಿವಿಧ ಕ್ಷೇತ್ರಗಳ ಜನರೂ ನಮ್ಮೊಂದಿಗೆ ಕೈಜೋಡಿಸುತ್ತಾರೆ. ಕೇಂದ್ರ ಮಟ್ಟದಲ್ಲಿ ಹೋರಾಟ ಮುಂದುವರಿಸುವುದರ ಜೊತೆಗೆ ರಾಜ್ಯಗಳಿಗೂ ಈ ಅಭಿಯಾನವನ್ನು ವಿಸ್ತರಿಸುತ್ತೇವೆ. ಮುಂಬರುವ ಸಂಸತ್ ಅಧಿವೇಶನದಲ್ಲಿಯೂ ಈ ವಿಚಾರವನ್ನು ಪ್ರಸ್ತಾಪಿಸಲು ಇಂಡಿಯಾ ಮೈತ್ರಿಕೂಟ ಸಿದ್ಧತೆ ನಡೆಸುತ್ತಿದೆ ಎಂದರು. ಇದನ್ನೂ ಓದಿ: Bengaluru Murder Horror | ಮೈಸೂರಿನ ಚಾಮುಂಡಿಬೆಟ್ಟ, ಚಾರ್ಮಾಡಿ ಘಾಟ್ನಲ್ಲಿ ಮೃತದೇಹ ಎಸೆದಿರೋ ಶಂಕೆ!