ವರದಾ–ಬೇಡ್ತಿ ಯೋಜನೆಗೆ ವಿರೋಧ ಸಲ್ಲದು: ಜೆಡಿಎಸ್
ಹಾನಗಲ್: ಮೂರ್ನಾಲ್ಕು ಜಿಲ್ಲೆಗಳ ಕುಡಿಯುವ ನೀರು ಮತ್ತು ಕೃಷಿ ನೀರಾವರಿ ಯೋಜನೆಯಾದ ವರದಾ ಮತ್ತು ಬೇಡ್ತಿ ನದಿ ಜೋಡಣೆಗೆ ವಿರೋಧಿಸುವುದು ಸರಿಯಲ್ಲ ಎಂದು ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ರಾಮನಗೌಡ ಪಾಟೀಲ ಹೇಳಿದರು.ಶನಿವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಯೋಜನೆಯ ಸಾಕಾರದಿಂದ ಕಡಿಮೆ ವೆಚ್ಚದಲ್ಲಿ ಸಾಕಷ್ಟು ಭೂ ಪ್ರದೇಶಕ್ಕೆ ನೀರು ಹರಿಸಲು ಸಾಧ್ಯ

ಹಾನಗಲ್: ಮೂರ್ನಾಲ್ಕು ಜಿಲ್ಲೆಗಳ ಕುಡಿಯುವ ನೀರು ಮತ್ತು ಕೃಷಿ ನೀರಾವರಿ ಯೋಜನೆಯಾದ ವರದಾ ಮತ್ತು ಬೇಡ್ತಿ ನದಿ ಜೋಡಣೆಗೆ ವಿರೋಧಿಸುವುದು ಸರಿಯಲ್ಲ ಎಂದು ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ರಾಮನಗೌಡ ಪಾಟೀಲ ಹೇಳಿದರು.ಶನಿವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಯೋಜನೆಯ ಸಾಕಾರದಿಂದ ಕಡಿಮೆ ವೆಚ್ಚದಲ್ಲಿ ಸಾಕಷ್ಟು ಭೂ ಪ್ರದೇಶಕ್ಕೆ ನೀರು ಹರಿಸಲು ಸಾಧ್ಯವಾಗಲಿದೆ ಎಂದರು.ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಮರ್ಪಕ ನಿರ್ವಹಣೆ ಆಗುತ್ತಿಲ್ಲ. ಚುನಾವಣೆಗಳನ್ನು ಗಮನದಲ್ಲಿ ಇಟ್ಟುಕೊಂಡು ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡಲಾಗುತ್ತಿದೆ. ಈ ನಡುವೆ ಗಂಡಸರ ಜೇಬಿಗೆ ಕತ್ತರಿ ಹಾಕಲಾಗುತ್ತದೆ. ಹಾಲು ಮತ್ತಿತರ ಅಗತ್ಯ ವಸ್ತುಗಳ ದರ ಏರಿಕೆಯಾಗಿದೆ ಎಂದು ಹರಿಹಾಯ್ದರು.ಹಾವೇರಿ ಜಿಲ್ಲೆಯಲ್ಲಿ ಕಬ್ಬು ಬೆಳೆಗೆ ಕಾರ್ಖಾನೆಗಳು ಬೆಲೆ ನಿಗದಿ ಮಾಡಿಲ್ಲ. ಹೀಗಾಗಿ ಆಡೂರಿನಲ್ಲಿ ನ. 10 ರಂದು ಧರಣಿ ಸತ್ಯಾಗ್ರಹ ಕೈಗೊಳ್ಳಲಾಗುತ್ತದೆ ಎಂದರು.ಸ್ಟಿಂಗ್ ಆಪರೇಷನ್ ಮೂಲಕ ರಾಜಕೀಯ ನಾಯಕರ ಮಾನ ಹರಾಜು ಹಾಕುವ ಷಡ್ಯಂತ್ರ ನಡೆಯುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.ಬರ ಆವರಿಸಿದ್ದು, ಪ್ರತಿ ಎಕರೆಗೆ ₹25 ಸಾವಿರ ಪರಿಹಾರಕ್ಕೆ ರಾಜ್ಯ ಸರ್ಕಾರ ಮುಂದಾಗುತ್ತಿಲ್ಲ. ಕನಿಷ್ಠ ಸರ್ಕಾರ ಘೋಷಿಸಿದ ಪರಿಹಾರದ ಹಣವೂ ರೈತರಿಗೆ ತಲುಪಿಲ್ಲ ಎಂದರು.ರಾಜ್ಯದ ಗೃಹ ಸಚಿವರು ತಮ್ಮ ಮಾತಿನಲ್ಲಿ ಹಿಡಿತ ಹೊಂದಬೇಕಾಗಿದೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಹಳ್ಳಿಗುಗ್ಗು ಎಂದು ಪದ ಬಳಕೆ ಮಾಡಿರುವುದು ಖಂಡನೀಯ ಎಂದರು.261108-22-465654535