ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವ ಸಂಭ್ರಮ
ಮಹದೇಶ್ವರ ಬೆಟ್ಟ: ಮಾದಪ್ಪನ ಸನ್ನಿಧಿ ಯಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ ಸಂಭ್ರಮ ಮನೆಮಾಡಿದ್ದು ನಾಡಿನೆಲ್ಲೆಡೆಯಿಂದ ಲಕ್ಷಾಂತರ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಪಡೆಯುತ್ತಿದ್ದಾರೆ. ಶ್ರದ್ಧಾ ಭಕ್ತಿಯಿಂದ ಮಹದೇಶ್ವರನ ಸ್ಮರಣೆ ಮಾಡುತ್ತಿದ್ದಾರೆ.ದೀಪಾವಳಿ ಜಾತ್ರೆಯ ಎರಡನೇ ದಿನವಾದ ಶನಿವಾರ ಮಹದೇಶ್ವರ ಸ್ವಾಮಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಬೇಡಗಂಪಣ ಸಮು

ಮಹದೇಶ್ವರ ಬೆಟ್ಟ: ಮಾದಪ್ಪನ ಸನ್ನಿಧಿ ಯಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ ಸಂಭ್ರಮ ಮನೆಮಾಡಿದ್ದು ನಾಡಿನೆಲ್ಲೆಡೆಯಿಂದ ಲಕ್ಷಾಂತರ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಪಡೆಯುತ್ತಿದ್ದಾರೆ. ಶ್ರದ್ಧಾ ಭಕ್ತಿಯಿಂದ ಮಹದೇಶ್ವರನ ಸ್ಮರಣೆ ಮಾಡುತ್ತಿದ್ದಾರೆ.ದೀಪಾವಳಿ ಜಾತ್ರೆಯ ಎರಡನೇ ದಿನವಾದ ಶನಿವಾರ ಮಹದೇಶ್ವರ ಸ್ವಾಮಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಬೇಡಗಂಪಣ ಸಮುದಾಯದ ಅರ್ಚಕರು ಧಾರ್ಮಿಕ ವಿಧಿವಿಧಾನ ಗಳನ್ನು ನೆರವೇರಿಸಿದರು.ದೇವರಿಗೆ ಎಣ್ಣೆ ಮಜ್ಜನ ಸೇವೆ ನಡೆದ ಬಳಿಕ ವಿಶೇಷ ಸೇವೆಗಳಾದ ಮಹಾ ಮಂಗಳಾರತಿ, ರುದ್ರಾಭಿಷೇಕ, ಗಂಧಾಭಿಷೇಕ ಮಹಾಪ್ರಸಾದ ಸೇವೆ ನಡೆಯಿತು. ಬಳಿಕ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು.ಜಿಲ್ಲಾಧಿಕಾರಿ ಭೇಟಿ: ಮಹದೇಶ್ವರನ ಬೆಟ್ಟಕ್ಕೆ ಭೇಟಿನೀಡಿದ್ದ ಜಿಲ್ಲಾಧಿಕಾರಿ ಶ್ರೀರೂಪಾ ಅವರಿಗೆ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು. ದೇವರ ದರ್ಶನ ಪಡೆದ ಜಿಲ್ಲಾಧಿಕಾರಿ ದೀಪಾವಳಿ ಜಾತ್ರೆಯ ಅಂಗವಾಗಿ ಪ್ರಾಧಿಕಾರ ಮಾಡಿಕೊಡಿಕೊಂಡಿರುವ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿದರು.ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದು ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ಶೌಚಾಲಯ, ತಂಗುದಾಣ, ಉಪಾಹಾರ, ಊಟದ ವ್ಯವಸ್ಥೆ ಅಚ್ಚುಕಟ್ಟಾಗಿ ನಡೆಯಬೇಕು. ದರ್ಶನದ ಸರತಿ ಸಾಲಿನಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು, 60 ವರ್ಷ ಮೇಲ್ಪಟ್ಟವರಿಗೆ ನೇರ ದರ್ಶನ ವ್ಯವಸ್ಥೆ ಮಾಡಬೇಕು, ಅಹಿತಕರ ಘಟನೆಗಳು ಜರುಗದಂತೆ ಎಚ್ಚರವಹಿಸಬೇಕು ಎಂದು ಪ್ರಾಧಿಕಾರದ ಕಾರ್ಯಧರ್ಶಿ ಪುರುಷೋತ್ತಮ್ ಅವರಿಗೆ ಸೂಚಿಸಿದರು.261108-37-1421806879