ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಯತ್ನ: ಶಿಕ್ಷಣಾಧಿಕಾರಿ ಎನ್. ಸುರೇಶಕುಮಾರ
ಹಿರೇಕೆರೂರು: ‘ತಾಲ್ಲೂಕಿನ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಸುಧಾರಣೆ, ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಹೆಚ್ಚಿಸುವುದು ಹಾಗೂ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲಾಗುವುದು’ ಎಂದು ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಸುರೇಶಕುಮಾರ ಹೇಳಿದರು.ಪಟ್ಟಣದ

ಹಿರೇಕೆರೂರು: ‘ತಾಲ್ಲೂಕಿನ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಸುಧಾರಣೆ, ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಹೆಚ್ಚಿಸುವುದು ಹಾಗೂ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲಾಗುವುದು’ ಎಂದು ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಸುರೇಶಕುಮಾರ ಹೇಳಿದರು.ಪಟ್ಟಣದ ಗುರುಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಿಕಟಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಶ್ರೀಧರ್ ಮಾತನಾಡಿ, ಹಿರೇಕೆರೂರು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸಿದ ಅವಧಿಯಲ್ಲಿ ಶಿಕ್ಷಕರು, ಶಿಕ್ಷಣ ಇಲಾಖೆಯ ಸಿಬ್ಬಂದಿ ಹಾಗೂ ವಿವಿಧ ಸಂಘಟನೆಗಳ ಮುಖಂಡರು ನೀಡಿದ ಸಹಕಾರವನ್ನು ಸ್ಮರಿಸಿದರು. ಎಲ್ಲರ ಸಹಕಾರದಿಂದ ಇಲಾಖೆಯ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸಾಧ್ಯವಾಯಿತು. ಮುಂದಿನ ದಿನಗಳಲ್ಲಿಯೂ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ತಾಲ್ಲೂಕಿನ ವಿವಿಧ ಶಿಕ್ಷಕ ಸಂಘಟನೆಗಳ ಪದಾಧಿಕಾರಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದು, ನಿಕಟಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಶ್ರೀಧರ್ ಅವರನ್ನು ಗೌರವಿಸಿ ಬೀಳ್ಕೊಟ್ಟರು. ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಸುರೇಶಕುಮಾರ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.ಅಖಿಲ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ಹನುಮಂತಪ್ಪ ದೀವಿಗಿಹಳ್ಳಿ , ಕ್ಷೇತ್ರ ಸಮನ್ವಯಾಧಿಕಾರಿ ಬಿ.ಆರ್.ತೇವರಿ , ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಚ್.ಎಚ್ ಜಾಡರ ಮತ್ತು ಇತರರು ಇದ್ದರು.261109-22-42918264