ಪರಿಷತ್ ಜಯ ಮುಂದಿನ ಚುನಾವಣೆಗೆ ದಿಕ್ಸೂಚಿ: ಶಶೀಲ್ ನಮೋಶಿ
ಲಿಂಗಸುಗೂರು: ‘ವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್ಡಿಎ ಭರ್ಜರಿ ಜಯಭೇರಿ ಬಾರಿಸಿದ್ದು, 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ’ ಎಂದು ನೂತನ ವಿಧಾನಪರಿಷತ್ ಸದಸ್ಯ ಶಶೀಲ್ ನಮೋಶಿ ಹೇಳಿದರು.ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.‘ಇತ್ತೀಚಿಗೆ ನಡೆದ ಪದವೀಧರ ಮತ್ತು ಶಿಕ್ಷ

ಲಿಂಗಸುಗೂರು: ‘ವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್ಡಿಎ ಭರ್ಜರಿ ಜಯಭೇರಿ ಬಾರಿಸಿದ್ದು, 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ’ ಎಂದು ನೂತನ ವಿಧಾನಪರಿಷತ್ ಸದಸ್ಯ ಶಶೀಲ್ ನಮೋಶಿ ಹೇಳಿದರು.ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.‘ಇತ್ತೀಚಿಗೆ ನಡೆದ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಪ್ರಜ್ಞಾವಂತ, ಶಿಕ್ಷಕ ಮತ್ತು ಪದವೀಧರ ಮತದಾರರು ಕಾಂಗ್ರೆಸ್ ಅನ್ನು ಸಂಪೂರ್ಣ ತಿರಸ್ಕರಿಸಿದ್ದಾರೆ. 2028ರ ವಿಧಾನಸಭೆ ಚುನಾವಣೆಯಲ್ಲಿ ಎನ್ಡಿಎ ಗೆಲುವಿಗೆ ದಿಕ್ಸೂಚಿಯಾಗಿದೆ. ಕಾಂಗ್ರೆಸ್ಸಿಗರು ವೋಟ್ ಚೋರಿ ಎಂದು ಅದೆಷ್ಟೇ ಬೊಬ್ಬೆ ಹೊಡೆದರೂ ಪ್ರಜ್ಞಾವಂತ ಮತದಾರರೇ ಇದೀಗ ಅದಕ್ಕೆ ಪ್ರತ್ಯುತ್ತರ ಕೊಟ್ಟಿದ್ದಾರೆ. ಶಿಕ್ಷಕರ ಸಮಸ್ಯೆಗಳಿಗೆ ಪ್ರಮಾಣಿಕವಾಗಿ ಸ್ಪಂದಿಸಿದ್ದರಿಂದ ನನ್ನನ್ನು ಐದು ಬಾರಿ ಚುನಾವಣೆಯಲ್ಲಿ ಗೆಲ್ಲಿಸಿದ್ದಾರೆ. ಶಾಸಕ ಮಾನಪ್ಪ ವಜ್ಜಲ್, ಪಕ್ಷದ ಮಂಡಲ ಅಧ್ಯಕ್ಷ ಹಾಗೂ ಕಾರ್ಯಕರ್ತರು ಶಕ್ತಿಮೀರಿ ಕೆಲಸ ಮಾಡಿದ್ದರಿಂದ ನನ್ನ ಗೆಲುವಾಗಿದೆ’ ಎಂದರು.ಬಿಜೆಪಿ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯ ಬಸವಂತರಾಯ ಕುರಿ, ಮಂಡಲ ಅಧ್ಯಕ್ಷ ಕೆ.ನಾಗಭೂಷಣ, ಗಿರಿಮಲ್ಲನಗೌಡ ಕರಡಕಲ್,ಅಯ್ಯಪ್ಪ ಮಾಳೂರು, ಈಶ್ವರ ವಜ್ಜಲ್, ಜೀವಲೆಪ್ಪ ನಾಯ್ಕ, ನಾರಾಯಣಪ್ಪ ರಾಠೋಡ್, ಮಂಜುನಾಥ ಐದನಾಳ, ಅಮರೇಶ ಗಂಭೀರಮಠ, ಫಕೀರಪ್ಪ ಕುರಿ, ಸಿದ್ದು ಬಡಿಗೇರ, ಎಚ್.ವಿ.ಪವಾರ ಹಾಗೂ ಇನ್ನಿತರರಿದ್ದರು.261109-32-1890094025