Kolkata Stampede | ಸಾವಿನ ಸಂಖ್ಯೆ 19ಕ್ಕೆ ಏರಿಕೆ – ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ, ಸರ್ಕಾರಿ ಉದ್ಯೋಗ
– ದುರಂತದ ಬೆನ್ನಲ್ಲೇ ಅಮಿತ್ ಶಾ ಕಾರ್ಯಕ್ರಮ ರದ್ದು – ಎಲ್ಲಾ ಪೆಂಡಾಲ್ಗಳ ಸುರಕ್ಷತಾ ಪರಿಶೀಲನೆಗೆ ಸಮಿತಿ ರಚನೆ ಕೋಲ್ಕತ್ತಾ: ಉತ್ತರ ಕೋಲ್ಕತ್ತಾದ ಚೋರ್ಬಗಾನ್ನ ದುರ್ಗಾ ಪೂಜಾ ಪೆಂಡಾಲ್ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ (Stampede) ಮೃತಪಟ್ಟವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ ಎಂದು ಬಂಗಾಳ ಸಿಎಂ ಸುವೇಂದು ಅಧಿಕಾರಿ (Suvendu Adhikari) ಭಾನುವಾರ ತಿಳಿಸಿದ್

– ದುರಂತದ ಬೆನ್ನಲ್ಲೇ ಅಮಿತ್ ಶಾ ಕಾರ್ಯಕ್ರಮ ರದ್ದು – ಎಲ್ಲಾ ಪೆಂಡಾಲ್ಗಳ ಸುರಕ್ಷತಾ ಪರಿಶೀಲನೆಗೆ ಸಮಿತಿ ರಚನೆ ಕೋಲ್ಕತ್ತಾ: ಉತ್ತರ ಕೋಲ್ಕತ್ತಾದ ಚೋರ್ಬಗಾನ್ನ ದುರ್ಗಾ ಪೂಜಾ ಪೆಂಡಾಲ್ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ (Stampede) ಮೃತಪಟ್ಟವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ ಎಂದು ಬಂಗಾಳ ಸಿಎಂ ಸುವೇಂದು ಅಧಿಕಾರಿ (Suvendu Adhikari) ಭಾನುವಾರ ತಿಳಿಸಿದ್ದಾರೆ. ಈ ಘಟನೆಯಲ್ಲಿ ಇನ್ನೂ 25 ಮಂದಿ ಗಾಯಗೊಂಡಿದ್ದಾರೆ. ಇನ್ನೂ ತಡರಾತ್ರಿ ಘಟನಾ ಸ್ಥಳಕ್ಕೆ ಹಾಗೂ ಕೋಲ್ಕತ್ತಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ, ಸಂತ್ರಸ್ತರಿಗೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದರು. ಇದೇ ವೇಳೆ ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ಮತ್ತು ‘ಗ್ರೂಪ್ ಡಿ’ (Group D) ಶ್ರೇಣಿಯ ಸರ್ಕಾರಿ ಉದ್ಯೋಗ ನೀಡುವುದಾಗಿ ಅವರು ಘೋಷಿಸಿದರು. ಇದರೊಂದಿಗೆ ಗಾಯಗೊಂಡವರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನ ಸರ್ಕಾರವೇ ಭರಿಸಲಿದೆ. ಜೊತೆಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿಯೂ ಘೋಷಿಸಿದರು. ಅಮಿತ್ ಶಾ ಕಾರ್ಯಕ್ರಮ ರದ್ದು ನಂತರ ಮಾತನಾಡಿ, ಇದು ಅತ್ಯಂತ ದುರದೃಷ್ಟಕರ ಘಟನೆ. 19 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅವರಲ್ಲಿ 17 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 25 ಮಂದಿ ಗಾಯಗೊಂಡಿದ್ದು, ಅವರಲ್ಲಿ 24 ಮಂದಿ ಅಪಾಯದಿಂದ ಪಾರಾಗಿದ್ದಾರೆ. ಒಬ್ಬರ ಸ್ಥಿತಿ ಗಂಭೀರವಾಗಿದೆ. ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ. ಸಂತ್ರಸ್ತ ಕುಟುಂಬಗಳ 13 ಸದಸ್ಯರು ನನ್ನನ್ನು ಭೇಟಿಯಾಗಿ, ಸರ್ಕಾರದ ಮೇಲೆ ತಮಗಿರುವ ನಂಬಿಕೆ ವ್ಯಕ್ತಪಡಿಸಿದ್ದಾರೆ. ಕೇಂದ್ರ ಗೃಹ ಸಚಿವರ ನಿಗದಿತ ಕಾರ್ಯಕ್ರಮಗಳನ್ನ ರದ್ದುಗೊಳಿಸಲಾಗಿದೆ. ನಾವು ಸಂತ್ರಸ್ತ ಕುಟುಂಬಗಳೊಂದಿಗೆ ಇದ್ದೇವೆ ಎಂದು ಹೇಳಿದರು. ಉನ್ನತ ಮಟ್ಟದ ತನಿಖೆಗೆ ಆಗ್ರಹ ಇನ್ನೂ ಈ ಘಟನೆ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಲು ‘ವಾಸ್ತವಾಂಶ ಪರಿಶೀಲನಾ ಸಮಿತಿ’ಯನ್ನು (fact-finding committee) ರಚಿಸುವಂತೆ ಕೋರಿ, ಕೋಲ್ಕತ್ತಾ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆಯುವುದಾಗಿ ಮುಖ್ಯಮಂತ್ರಿ ತಿಳಿಸಿದರು. ಈ ಸಮಿತಿಯಲ್ಲಿ ವಿಧಿವಿಜ್ಞಾನ ತಂಡಗಳು (forensic teams) ಮತ್ತು ವಿಶೇಷ ಕಾರ್ಯಪಡೆ (STF) ಸದಸ್ಯರು ಇರಲಿದ್ದಾರೆ. ಇದರೊಂದಿಗೆ, ರಾಜ್ಯದ ಪ್ರಮುಖ ದುರ್ಗಾ ಪೂಜಾ ಪೆಂಡಾಲ್ಗಳಲ್ಲಿನ ಸುರಕ್ಷತಾ ವ್ಯವಸ್ಥೆಗಳನ್ನು ಪರಿಶೀಲಿಸಲು ಸುವೇಂದು ಅಧಿಕಾರಿ ಉನ್ನತ ಮಟ್ಟದ ಸಮಿತಿಯೊಂದನ್ನ ರಚಿಸಿದ್ದಾರೆ. ವಿಪತ್ತು ನಿರ್ವಹಣಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಶ್ ಸಿನ್ಹಾ, ಅಗ್ನಿಶಾಮಕ ಸೇವೆಗಳ ಮಹಾನಿರ್ದೇಶಕ ಅನುಜ್ ಶರ್ಮಾ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಜಾವೇದ್ ಶಮೀಮ್ ಅವರನ್ನು ಒಳಗೊಂಡ ಈ ಸಮಿತಿಯು, ಪ್ರಮುಖ ಪೂಜಾ ಸ್ಥಳಗಳಲ್ಲಿ ಜನಸಂದಣಿ ನಿರ್ವಹಣೆ, ನಿರ್ಗಮನ ಮಾರ್ಗಗಳು ಮತ್ತು ರಚನಾತ್ಮಕ ಸುರಕ್ಷತೆಯ ಬಗ್ಗೆ ಪರಿಶೀಲನೆ ನಡೆಸಲಿದೆ ಎಂದು ವಿವರಿಸಿದರು.