Milk Rate: ನಂದಿನಿ ಹಾಲಿನ ದರ ಲೀಟರ್ಗೆ ₹8 ಹೆಚ್ಚಳ, ನವೆಂಬರ್ 1 ರಿಂದ ಜಾರಿ
ಬೆಂಗಳೂರು: ಕರ್ನಾಟಕದಲ್ಲಿ ವಿಧಾನಪರಿಷತ್ ಚುನಾವಣೆ ಪ್ರಕ್ರಿಯೆ ಮುಗಿದ ಮರು ದಿನವೇ ನಂದಿನಿ ಹಾಲಿನ ಬೆಲೆಯನ್ನು ಏರಿಕೆ ಮಾಡಲಾಗಿದೆ. ಹೊಸ ದರ ನವೆಂಬರ್ 1ರಿಂದಲೇ ಜಾರಿಗೆ ಬರಲಿದೆ.ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ದರ ಏರಿಕೆಗೆ ಒಪ್ಪಿಗೆ ನೀಡಲಾಗಿದೆ.ಪ್ರತಿ ಲೀಟರ್ ನಂದಿನಿ ಹಾಲಿನ ದರವನ್ನು ₹8ಗೆ ಏರಿಕೆ ಮಾ
ಬೆಂಗಳೂರು: ಕರ್ನಾಟಕದಲ್ಲಿ ವಿಧಾನಪರಿಷತ್ ಚುನಾವಣೆ ಪ್ರಕ್ರಿಯೆ ಮುಗಿದ ಮರು ದಿನವೇ ನಂದಿನಿ ಹಾಲಿನ ಬೆಲೆಯನ್ನು ಏರಿಕೆ ಮಾಡಲಾಗಿದೆ. ಹೊಸ ದರ ನವೆಂಬರ್ 1ರಿಂದಲೇ ಜಾರಿಗೆ ಬರಲಿದೆ.ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ದರ ಏರಿಕೆಗೆ ಒಪ್ಪಿಗೆ ನೀಡಲಾಗಿದೆ.ಪ್ರತಿ ಲೀಟರ್ ನಂದಿನಿ ಹಾಲಿನ ದರವನ್ನು ₹8ಗೆ ಏರಿಕೆ ಮಾಡಲಾಗಿದೆ. ಇದರಲ್ಲಿ ₹7 ಹಾಲು ಉತ್ಪಾದಕರಿಗೆ ಹಾಗೂ ₹1 ಕೆಎಂಎಫ್ಗೆ ನೀಡಲಾಗುವುದು ಎಂದು ಸಂಪುಟ ಸಭೆಯ ಬಳಿಕ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.ನಂದಿನಿ ಹಾಲಿನ ಖರೀದಿ ಮತ್ತು ಮಾರಾಟ ದರವನ್ನು ಪ್ರತಿ ಲೀಟರ್ ಗೆ ₹ 8ರಿಂದ ₹10ರಷ್ಟು ಹೆಚ್ಚಿಸಲು ಕರ್ನಾಟಕ ರಾಜ್ಯದ ಸಹಕಾರ ಹಾಲು ಉತ್ಪಾದಕರ ಒಕ್ಕೂಟಗಳ ನಿಯೋಗ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಕಳೆದ ತಿಂಗಳು ಮನವಿ ಸಲ್ಲಿಸಿತ್ತು.ಕಳೆದ 10 ವರ್ಷಗಳಲ್ಲಿ ಪಶು ಆಹಾರ ದರದಲ್ಲಿನ ಹೆಚ್ಚಳ, ಪ್ರತಿ ಲೀಟರ್ ಹಾಲು ಉತ್ಪಾದನೆಗೆ ತಗಲುವ ವೆಚ್ಚ, ಜಿಲ್ಲೆಗಳಲ್ಲಿ ಎಷ್ಟು ಪ್ರಮಾಣದ ಹಾಲು, ಒಕ್ಕೂಟ ಹೊರತುಪಡಿಸಿ ಬೇರೆ ಕಡೆ ಮಾರಾಟವಾಗುತ್ತಿದೆ? ಒಕ್ಕೂಟ ಎಷ್ಟು ಖರೀದಿಸುತ್ತಿದೆ? ನೆರೆಯ ರಾಜ್ಯಗಳಲ್ಲಿ ಹಾಲು ಖರೀದಿ ಮತ್ತು ಮಾರಾಟ ದರದ ವಿವರ ಸೇರಿದಂತೆ ಸಮಗ್ರ ಮಾಹಿತಿಯನ್ನು ಸಲ್ಲಿಸಿ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದರು.ಇದಾದ ಬಳಿಕ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿತ್ತು. ಈ ತಿಂಗಳ ಆರಂಭದಲ್ಲಿಯೇ ದರ ಏರಿಕೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿತ್ತಾದರೂ ಕರ್ನಾಟಕ ವಿಧಾನಪರಿಷತ್ ಚುನಾವಣೆ ನೀತಿ ಸಂಹಿತೆ ಇದ್ದುದರಿಂದ ಜಾರಿ ಮಾಡುವುದನ್ನು ಮುಂದೂಡಲಾಗಿತ್ತು. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ಮುದ್ರೆಯನ್ನು ಒತ್ತಲಾಗಿದೆ. ಸಾರಿಗೆ ಸಚಿವ ಬೈರತಿ ಸುರೇಶ್‘ಬಸ್ ಪ್ರಯಾಣ ದರ ಹೆಚ್ಚಳ: ನ. 4ಕ್ಕೆ ಪ್ರಕಟ’‘ಸರ್ಕಾರಿ ಬಸ್ಗಳ ಪ್ರಯಾಣ ದರ ಏರಿಸುವ ಕುರಿತು ನ.3ರಂದು ನಾಲ್ಕೂ ಸಾರಿಗೆ ನಿಗಮಗಳ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಯಲಿದೆ. ನ.4ರಂದು ದರ ಹೆಚ್ಚಳದ ನಿರ್ಧಾರ ಪ್ರಕಟವಾಗಲಿದೆ’ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಹೇಳಿದರು.ಕರ್ನಾಟಕದಲ್ಲಿ ಒಕ್ಕೂಟ ಉತ್ಪಾದಕರಿಂದ ಟೋನ್ಡ್ ಹಾಲನ್ನು ಲೀಟರಿಗೆ ₹ 35ಕ್ಕೆ ಖರೀದಿಸುತ್ತಿದ್ದು, ನೆರೆಯ ಆಂಧ್ರಪ್ರದೇಶದಲ್ಲಿ ₹ 41.5, ಕೇರಳದಲ್ಲಿ ₹ 41.8, ಮಹಾರಾಷ್ಟ್ರದಲ್ಲಿ ₹ 41, ತಮಿಳುನಾಡಿನಲ್ಲಿ ₹ 42.24 ಕ್ಕೆ ಖರೀದಿಸಲಾಗುತ್ತಿದೆ. ಹಾಲಿನ ಗರಿಷ್ಠ ಮಾರಾಟ ದರದಲ್ಲಿ ಸಹ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಲೀಟರಿಗೆ ಕನಿಷ್ಠ ₹ 12 ರಷ್ಟು ಕಡಿಮೆಯಿತ್ತು ಎನ್ನುವುದು ಅಧಿಕಾರಿಗಳ ವಿವರಣೆ.ಯಾವ ರಾಜ್ಯದಲ್ಲಿ ಎಷ್ಟು?