MLC Election| ಪ್ರಾಣೇಶ್ ವಿರುದ್ಧ 9 ಮತಗಳ ಗೆಲುವು: ಸತ್ಯಕ್ಕೆ ಸಂದ ಜಯ ಎಂದ ಗಾಯತ್ರಿ ಶಾಂತೇಗೌಡ
ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ಗಳಲ್ಲಿ ನಡೆದ ಸುದೀರ್ಘ ಕಾನೂನು ಹೋರಾಟದ ನಂತರ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ(Gayatri Shantegowda) ಅವರು ಬಿಜೆಪಿ ಅಭ್ಯರ್ಥಿ ಹಾಗೂ ಪರಿಷತ್ ಉಪಸಭಾಪತಿಯಾಗಿದ್ದ ಎಂ.ಕೆ. ಪ್ರಾಣೇಶ್(MK Pranesh) ವಿರುದ್ಧ 9 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ತೀರ್ಪಿನ

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ಗಳಲ್ಲಿ ನಡೆದ ಸುದೀರ್ಘ ಕಾನೂನು ಹೋರಾಟದ ನಂತರ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ(Gayatri Shantegowda) ಅವರು ಬಿಜೆಪಿ ಅಭ್ಯರ್ಥಿ ಹಾಗೂ ಪರಿಷತ್ ಉಪಸಭಾಪತಿಯಾಗಿದ್ದ ಎಂ.ಕೆ. ಪ್ರಾಣೇಶ್(MK Pranesh) ವಿರುದ್ಧ 9 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ತೀರ್ಪಿನ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಗಾಯತ್ರಿ ಶಾಂತೇಗೌಡ ಅವರು ಸತ್ಯಕ್ಕೆ ಯಾವತ್ತಿದ್ದರೂ ಜಯ ಸಿಗುತ್ತದೆ ಎಂಬುದು ಇಂದು ಸಾಬೀತಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ವಿಧಾನಪರಿಷತ್ ಚುನಾವಣೆಯಲ್ಲಿ ಆರಂಭದಲ್ಲಿ ನಾನು ಪ್ರಾಣೇಶ್ ಅವರ ವಿರುದ್ಧ ಕೇವಲ 6 ಮತಗಳಿಂದ ಸೋತಿದ್ದೆ. ಅದನ್ನು ಪ್ರಶ್ನಿಸಿ ನಾನು ಹೈಕೋರ್ಟ್ ಮೆಟ್ಟಿಲೇರಿದ್ದೆ. ಹೈಕೋರ್ಟ್ನಲ್ಲಿ ನಡೆದ ವಿಚಾರಣೆ ಮತ್ತು ಮರು ಎಣಿಕೆಯ ಫಲಿತಾಂಶ ಇಂದು ಮುಚ್ಚಿದ ಲಕೋಟೆಯಲ್ಲಿ ಪ್ರಕಟವಾಗಿದ್ದು ನಾನು 9 ಮತಗಳಿಂದ ವಿಜೇತರಾಗಿದ್ದೇನೆ ಎಂದು ತೀರ್ಪು ನೀಡಿದೆ ಎಂದರು. ಸ್ಥಳೀಯ ಸಂಸ್ಥೆಗಳಿಗೆ ನಾಮನಿರ್ದೇಶನಗೊಂಡ ಸದಸ್ಯರು ಪರಿಷತ್ ಚುನಾವಣೆಯಲ್ಲಿ ಮತದಾನ ಮಾಡುವಂತಿಲ್ಲ ಎಂದು ಕೋರ್ಟ್ ಸ್ಪಷ್ಟ ತೀರ್ಪು ನೀಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ಪ್ರಾಣೇಶ್ ಅವರು ಸುಪ್ರೀಂ ಕೋರ್ಟ್ಗೆ ಹೋಗಿದ್ದರು. ಆದರೆ ಸುಪ್ರೀಂ ಕೋರ್ಟ್ ಅವರ ಅರ್ಜಿಯನ್ನು ವಜಾಗೊಳಿಸಿತು. ಈಗ ಅಂತಿಮವಾಗಿ ನ್ಯಾಯ ಸಿಕ್ಕಿದೆ ಎಂದು ವಿವರಿಸಿದರು. ಇದನ್ನೂ ಓದಿ: ಪಾಕ್ ಗ್ಯಾಂಗ್ಸ್ಟರ್ ಉಜೈರ್ ಬಲೂಚ್ ಸಹೋದರನ ಮೇಲೆ ಗುಂಡೇಟು – ಸ್ಥಿತಿ ಗಂಭೀರ ಈ ಫಲಿತಾಂಶದಿಂದ ನನ್ನ ವಕೀಲರು, ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿರಿಯ ನಾಯಕರಾದ ಬಿ.ಕೆ. ಹರಿಪ್ರಸಾದ್, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಎಲ್ಲಾ ನಾಯಕರು ಹಾಗೂ ಕಾರ್ಯಕರ್ತರು ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ. ಎಲ್ಲರಿಗೂ ನನ್ನ ಧನ್ಯವಾದಗಳು ಎಂದರು. ಇನ್ನೂ 1.5 ವರ್ಷಗಳ ಆಡಳಿತಾವಧಿ ಬಾಕಿ ಇದ್ದು, ಕಾರ್ಯವಿಧಾನಗಳ ಕುರಿತು ಹೈಕೋರ್ಟ್ ಈಗಾಗಲೇ ಸಭಾಪತಿಗಳಿಗೆ ಸೂಕ್ತ ಸೂಚನೆ ನೀಡಿದೆ ಎಂದು ಗಾಯತ್ರಿ ಶಾಂತೇಗೌಡ ಅವರು ಮಾಹಿತಿ ನೀಡಿದರು. ಏನಿದು ಪ್ರಕರಣ? ಡಿಸೆಂಬರ್ 2021 ರ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಎಂ.ಕೆ. ಪ್ರಾಣೇಶ್ ಅವರು ಗಾಯತ್ರಿ ಶಾಂತೇಗೌಡ ಅವರ ವಿರುದ್ಧ 6 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಸ್ಥಳೀಯ ಪಟ್ಟಣ ಪಂಚಾಯಿತಿಗಳ 12 ನಾಮನಿರ್ದೇಶಿತ (Nominated) ಸದಸ್ಯರು ಈ ಚುನಾವಣೆಯಲ್ಲಿ ಮತ ಚಲಾಯಿಸಿದ್ದರು. ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಮತ್ತು ಅವರ ಮತಗಳು ಸಂವಿಧಾನಬಾಹಿರ ಎಂದು ಗಾಯತ್ರಿ ಶಾಂತೇಗೌಡ ಕೋರ್ಟ್ ಮೆಟ್ಟಿಲೇರಿದ್ದರು. ನಾಮನಿರ್ದೇಶಿತ ಸದಸ್ಯರ ಮತಗಳು ಅಸಿಂಧು ಎಂದು ಒಪ್ಪಿದ ಹೈಕೋರ್ಟ್, ಆ 12 ಮತಗಳನ್ನು ಹೊರಗಿಟ್ಟು ಮತ್ತೆ ಮರು ಮತ ಎಣಿಕೆ ಮಾಡುವಂತೆ ಜಿಲ್ಲಾಡಳಿತಕ್ಕೆ ಆದೇಶಿಸಿತ್ತು. ಎಂ.ಕೆ. ಪ್ರಾಣೇಶ್ ಅವರು ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದರು. ಆದರೆ ಸುಪ್ರೀಂ ಕೋರ್ಟ್ ಕೂಡ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದು, ಮರು ಎಣಿಕೆಯ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ಸೂಚಿಸಿತ್ತು.