NEET UG 2026 ಫಲಿತಾಂಶ ಪ್ರಕಟ – 11.21 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣ
ನವದೆಹಲಿ: ವೈದ್ಯಕೀಯ ಶಿಕ್ಷಣದ ಕನಸು ಹೊತ್ತು ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿದ್ದ NEET UG 2026 ಪರೀಕ್ಷೆಯ ಫಲಿತಾಂಶವನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಗುರುವಾರ (ಜು.16) ಪ್ರಕಟಿಸಿದೆ. ಪರೀಕ್ಷೆ ಬರೆದಿದ್ದ 20 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಪೈಕಿ 11.21 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರೊಂದಿಗೆ ದೇಶಾದ್ಯಂತ ವೈದ್ಯಕೀಯ, ದಂತ ವೈ

ನವದೆಹಲಿ: ವೈದ್ಯಕೀಯ ಶಿಕ್ಷಣದ ಕನಸು ಹೊತ್ತು ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿದ್ದ NEET UG 2026 ಪರೀಕ್ಷೆಯ ಫಲಿತಾಂಶವನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಗುರುವಾರ (ಜು.16) ಪ್ರಕಟಿಸಿದೆ. ಪರೀಕ್ಷೆ ಬರೆದಿದ್ದ 20 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಪೈಕಿ 11.21 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರೊಂದಿಗೆ ದೇಶಾದ್ಯಂತ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಹಾಗೂ ಇತರೆ ಆರೋಗ್ಯ ವಿಜ್ಞಾನ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆ ಮತ್ತು ಕೌನ್ಸೆಲಿಂಗ್ಗೆ ಅಧಿಕೃತವಾಗಿ ಚಾಲನೆ ದೊರೆತಿದೆ. ಇದನ್ನೂ ಓದಿ: ಹೈದ್ರಾಬಾದ್ನ ಶಾಲೆಯಲ್ಲಿ ವಿದ್ಯಾರ್ಥಿಗೆ ಕಲ್ಮಾ ಪಠಣೆ ಹೋಮ್ವರ್ಕ್ – ಪೋಷಕರ ಆಕ್ರೋಶದ ಬೆನ್ನಲ್ಲೇ ಶಿಕ್ಷಕಿ ವಜಾ ಈ ವರ್ಷ ಜೂನ್ 21ರಂದು ನಡೆದ NEET UG 2026 ಪರೀಕ್ಷೆಗೆ ದೇಶ-ವಿದೇಶಗಳಿಂದ ಸೇರಿ ಸುಮಾರು 20 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಭಾರತದ 551 ನಗರಗಳಲ್ಲಿನ 5,440 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ವಿದೇಶದ 14 ನಗರಗಳಲ್ಲಿ ಪರೀಕ್ಷೆ ನಡೆದಿತ್ತು. ಒಟ್ಟು ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳ ಪೈಕಿ 11.21 ಲಕ್ಷ ವಿದ್ಯಾರ್ಥಿಗಳು ಅರ್ಹತೆ ಪಡೆದಿದ್ದಾರೆ. ಇವರು MBBS, BDS, AYUSH ಹಾಗೂ ಇತರ ಆರೋಗ್ಯ ವಿಜ್ಞಾನ ಪದವಿ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಅರ್ಹರಾಗಿದ್ದಾರೆ. ಇದನ್ನೂ ಓದಿ: ಇಸ್ರೋದಲ್ಲಿ ಕಳೆದ ಕೆಲ ತಿಂಗಳಲ್ಲಿ 100ಕ್ಕೂ ಹೆಚ್ಚು ವಿಜ್ಞಾನಿಗಳ ರಾಜೀನಾಮೆ – ಕೇಂದ್ರ ಸರ್ಕಾರದ ಮಧ್ಯಪ್ರವೇಶ ಅಂಕಪಟ್ಟಿ ಡೌನ್ಲೋಡ್ ಮಾಡುವುದು ಹೇಗೆ? ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಸ್ಕೋರ್ಕಾರ್ಡ್ ಅನ್ನು NEET ಅಧಿಕೃತ ವೆಬ್ಸೈಟ್ ಮೂಲಕ ಡೌನ್ಲೋಡ್ ಮಾಡಬಹುದು. ಅದಕ್ಕಾಗಿ ಮೊದಲಿಗೆ * neet.nta.nic.in ವೆಬ್ಸೈಟ್ಗೆ ಭೇಟಿ ನೀಡಿ. * ಮುಖಪುಟದಲ್ಲಿರುವ NEET UG 2026 Scorecard / Re-exam Scorecard ಲಿಂಕ್ ಮೇಲೆ ಕ್ಲಿಕ್ ಮಾಡಿ. * ನಿಮ್ಮ ರಿಜಿಸ್ಟ್ರೇಶನ್ ಸಂಖ್ಯೆ ಅಥವಾ ರೋಲ್ ನಂಬರ್ ಹಾಗೂ ಅಗತ್ಯ ಲಾಗಿನ್ ವಿವರಗಳನ್ನು ನಮೂದಿಸಿ. * ನಂತರ ನಿಮ್ಮ ಸ್ಕೋರ್ಕಾರ್ಡ್ ಪರದೆಯ ಮೇಲೆ ಕಾಣಿಸುತ್ತದೆ. * ಅದನ್ನು PDF ರೂಪದಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು.