Sandalwood| ಅಯೋಗ್ಯ–2, ಡಿಟೆಕ್ಟಿವ್ ತೀಕ್ಷ್ಣ ಸೇರಿದಂತೆ 5 ಸಿನಿಮಾಗಳು ತೆರೆಗೆ
ಚಂದನವನದ ತೆರೆಗಳಲ್ಲಿ ಇಂದು(ಆ.7) ಐದು ಸಿನಿಮಾಗಳು ತೆರೆಕಾಣುತ್ತಿವೆ.ಎಸ್.ಮಹೇಶ್ ಕುಮಾರ್ ನಿರ್ದೇಶನದ ಚಿತ್ರವಿದು. 2018ರಲ್ಲಿ ತೆರೆಕಂಡ ‘ಅಯೋಗ್ಯ’ ಸಿನಿಮಾದ ಮುಂದುವರಿದ ಭಾಗ ಇದಾಗಿದ್ದು, ಸತೀಶ್ ನೀನಾಸಂ ಹಾಗೂ ರಚಿತಾ ರಾಮ್ ಮುಖ್ಯಭೂಮಿಕೆಯಲ್ಲಿದ್ದಾರೆ. ಚಿತ್ರಕ್ಕೆ ಮಾಸ್ತಿ ಸಂಭಾಷಣೆ ಬರೆದಿದ್ದು, ರವಿಶಂಕರ್, ಸಾಧು ಕೋಕಿಲ, ತಬಲಾ ನಾಣಿ, ಸುಂದರ್ರಾಜ್, ಶಿ

ಚಂದನವನದ ತೆರೆಗಳಲ್ಲಿ ಇಂದು(ಆ.7) ಐದು ಸಿನಿಮಾಗಳು ತೆರೆಕಾಣುತ್ತಿವೆ.ಎಸ್.ಮಹೇಶ್ ಕುಮಾರ್ ನಿರ್ದೇಶನದ ಚಿತ್ರವಿದು. 2018ರಲ್ಲಿ ತೆರೆಕಂಡ ‘ಅಯೋಗ್ಯ’ ಸಿನಿಮಾದ ಮುಂದುವರಿದ ಭಾಗ ಇದಾಗಿದ್ದು, ಸತೀಶ್ ನೀನಾಸಂ ಹಾಗೂ ರಚಿತಾ ರಾಮ್ ಮುಖ್ಯಭೂಮಿಕೆಯಲ್ಲಿದ್ದಾರೆ. ಚಿತ್ರಕ್ಕೆ ಮಾಸ್ತಿ ಸಂಭಾಷಣೆ ಬರೆದಿದ್ದು, ರವಿಶಂಕರ್, ಸಾಧು ಕೋಕಿಲ, ತಬಲಾ ನಾಣಿ, ಸುಂದರ್ರಾಜ್, ಶಿವರಾಜ್ ಕೆ.ಆರ್.ಪೇಟೆ, ಮಂಜು ಪಾವಗಡ, ಕಿರಣ್ ನಾಯ್ಕ್ ಚಿತ್ರದ ತಾರಾಬಳಗದಲ್ಲಿದ್ದಾರೆ. ಸಿನಿಮಾವನ್ನು ಎಂ.ಮುನೇಗೌಡ ಅವರು ನಿರ್ಮಾಣ ಮಾಡಿದ್ದಾರೆ.ಪ್ರಿಯಾಂಕ ಉಪೇಂದ್ರ ಅಭಿನಯದ 50ನೇ ಚಿತ್ರ ಇದಾಗಿದೆ. ತ್ರಿವಿಕ್ರಮ ರಘು ರಚಿಸಿ, ಸಂಭಾಷಣೆ ಬರೆದು ನಿರ್ದೇಶಿಸಿರುವ ಸಿನಿಮಾ ಇದು. ತ್ರಿವಿಕ್ರಮ್ ಅವರ ಚೊಚ್ಚಲ ಸಿನಿಮಾ ಇದಾಗಿದೆ. ಇವೆಂಟ್ ಲಿಂಕ್ಸ್ ಎಂಟರ್ಟೇನ್ಮೆಂಟ್ ಅಡಿಯಲ್ಲಿ ಗುತ್ತ ಮುನಿಪ್ರಸನ್ನ, ಜಿ.ಮುನಿ ವೆಂಕಟ್ಚರಣ್ ಮತ್ತು ಪುರುಷೋತ್ತಮ್ ಬಿ.ಕೊಯ್ಯೂರು ಜಂಟಿಯಾಗಿ ಸಿನಿಮಾ ನಿರ್ಮಾಣ ಮಾಡಿದ್ದಾರೆ.‘ಗೋಲ್ಡನ್ ಮೂವೀಸ್’ ಲಾಂಛನದಲ್ಲಿ ಶಿಲ್ಪಾ ಗಣೇಶ್ ನಿರ್ಮಾಣ ಮಾಡಿರುವ, ಸಂದೀಪ್ ಬೆದ್ರ ನಿರ್ದೇಶನದ ಸಿನಿಮಾವಿದು. ತುಳು ಹಾಗೂ ಕನ್ನಡ ಭಾಷೆಗಳಲ್ಲಿ ಈ ಸಿನಿಮಾ ತೆರೆಕಂಡಿದೆ. ಕೌಟುಂಬಿಕ, ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಿತ್ಯಪ್ರಕಾಶ್ ಬಂಟ್ವಾಳ್ ಹಾಗೂ ಅಮೃತ ಸುದು ಜೋಡಿಯಾಗಿ ಅಭಿನಯಿಸಿದ್ದಾರೆ.ತನುಷ್ ಶಿವಣ್ಣ ನಾಯಕರಾಗಿ ನಟಿಸಿರುವ, ವಿ.ಲವ ನಿರ್ದೇಶನದ ‘ಬಾಸ್’ ಸಿನಿಮಾ, ಭುವನ್ ಚಂದ್ರ ಹಾಗೂ ಅಲ್ಮಾಸ್ ನಟಿಸಿರುವ ‘ಅಕ್ಷರ’ ಸಿನಿಮಾವೂ ತೆರೆಕಂಡಿದೆ.ಕಿರಣ್ ಆದಿತ್ಯ ಮತ್ತು ಲೇಖ ಚಂದ್ರ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ ‘ಲೈಫ್ ಟುಡೇ’ ಗುರುವಾರ(ಆ.6) ರಿಲೀಸ್ ಆಗಿದೆ. ‘ಗೋಲ್ಡನ್ ಮೂವೀಸ್’ ಲಾಂಛನದಲ್ಲಿ ಶಿಲ್ಪಾ ಗಣೇಶ್ ನಿರ್ಮಾಣ ಮಾಡಿರುವ, ಸಂದೀಪ್ ಬೆದ್ರ ನಿರ್ದೇಶನದ ಸಿನಿಮಾವಿದು. ತುಳು ಹಾಗೂ ಕನ್ನಡ ಭಾಷೆಗಳಲ್ಲಿ ಈ ಸಿನಿಮಾ ತೆರೆಕಂಡಿದೆ. ಕೌಟುಂಬಿಕ, ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಿತ್ಯಪ್ರಕಾಶ್ ಬಂಟ್ವಾಳ್ ನಾಯಕರಾಗಿ ನಟಿಸಿದ್ದಾರೆ. ನಾಯಕಿಯಾಗಿ ಅಮೃತ ಸುದು ಅಭಿನಯಿಸಿದ್ದಾರೆ. ದೇವದಾಸ್ ಕಾಪಿಕಾಡ್, ನವೀನ್ ಡಿ.ಪಡೀಲ್, ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರ್, ಸಾಯಿಕೃಷ್ಣ, ವಜ್ರಧೀರ್ ಜೈನ್, ಸದಾಶಿವ ಅಮಿನ್, ಪ್ರಸನ್ನ ಶೆಟ್ಟಿ ಬೈಲೂರ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸಂತೋಷ್ ರೈ ಪಾತಾಜೆ ಹಾಗೂ ಚಂದ್ರಶೇಖರ್ ಕೆ.ಎಸ್ ಛಾಯಾಚಿತ್ರಗ್ರಹಣ, ರಾಜು ಆರ್ಯನ್ ಸಂಕಲನ, ಧನಂಜಯ್.ಬಿ- ಶ್ರೀರಾಜು ನೃತ್ಯ ನಿರ್ದೇಶನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಚಿತ್ರಕ್ಕಿದೆ. ಸ್ಯಾಮುಯೆಲ್ ಅಭಿ ಸಂಗೀತ ನೀಡಿರುವ ಈ ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಶಿಲ್ಪಾ ಗಣೇಶ್ ಅವರೂ ಜಸ್ಕರಣ್ ಸಿಂಗ್ ಜೊತೆಗೂಡಿ ಹಾಡೊಂದನ್ನು ಹಾಡಿದ್ದಾರೆ.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260807-51-1886613485