UGC NET ಪರೀಕ್ಷೆಗೆ 8.78 ಲಕ್ಷಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ
ನವದೆಹಲಿ: ಇದೇ ಡಿಸೆಂಬರ್ನಲ್ಲಿ ನಡೆಯಲಿರುವ ಯುಜಿಸಿ ನೆಟ್ (UGC NET) ಪರೀಕ್ಷೆಗೆ ಅಭ್ಯರ್ಥಿಗಳಿಂದ ಭರ್ಜರಿ ಸ್ಪಂದನೆ ಸಿಕ್ಕಿದೆ. ಇದುವರೆಗೂ 8.78 ಲಕ್ಷಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ. 6.92 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಪರೀಕ್ಷಾ ಶುಲ್ಕವನ್ನು ಪಾವತಿಸಿದ್ದಾರೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ. ಇನ್ನೂ ಅರ್ಜಿ ಸಲ್ಲಿಸದ ಅಭ್ಯರ್ಥ

ನವದೆಹಲಿ: ಇದೇ ಡಿಸೆಂಬರ್ನಲ್ಲಿ ನಡೆಯಲಿರುವ ಯುಜಿಸಿ ನೆಟ್ (UGC NET) ಪರೀಕ್ಷೆಗೆ ಅಭ್ಯರ್ಥಿಗಳಿಂದ ಭರ್ಜರಿ ಸ್ಪಂದನೆ ಸಿಕ್ಕಿದೆ. ಇದುವರೆಗೂ 8.78 ಲಕ್ಷಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ. 6.92 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಪರೀಕ್ಷಾ ಶುಲ್ಕವನ್ನು ಪಾವತಿಸಿದ್ದಾರೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ. ಇನ್ನೂ ಅರ್ಜಿ ಸಲ್ಲಿಸದ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ugcnet.nta.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ನಮೂನೆಗಳನ್ನು ಭರ್ತಿ ಮಾಡಬಹುದು, ಪರೀಕ್ಷಾ ಶುಲ್ಕವನ್ನು ಪಾವತಿಸಬಹುದು. ತಮ್ಮ ದೃಢೀಕರಣ ಪುಟಗಳನ್ನು (confirmation pages) ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ತಿಳಿಸಿದೆ. ಇದನ್ನೂ ಓದಿ: ಕಾನ್ಸ್ಟೇಬಲ್ ಪರೀಕ್ಷೆಯಲ್ಲಿ 25, VAO ಪರೀಕ್ಷೆಯಲ್ಲಿ 151 ಅಂಕ: ಹಾವೇರಿ ಅಭ್ಯರ್ಥಿಯ ಅಂಕ ರಹಸ್ಯ ಭೇದಿಸಲು ತನಿಖೆಗೆ ಆದೇಶ ಡಿಸೆಂಬರ್ 14ರಿಂದ 19ರವರೆಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಯಲಿದೆ. ಜೆಆರ್ಎಫ್, ಸಹಾಯಕ ಪ್ರಾಧ್ಯಾಪಕ ಹುದ್ದೆ ಮತ್ತು ಪಿಹೆಚ್ಡಿ ಪ್ರವೇಶಕ್ಕೆ ಯುಜಿಸಿ ನೆಟ್ ಅರ್ಹತೆ ಪರೀಕ್ಷೆಯಾಗಿದೆ. ಕೊನೆಯ ಕ್ಷಣದವರೆಗೆ ಕಾಯದೆ ಅರ್ಜಿ ಸಲ್ಲಿಸುವಂತೆ ಅಭ್ಯರ್ಥಿಗಳಿಗೆ ಸೂಚನೆ ನೀಡಲಾಗಿದೆ. ತಮ್ಮ ಗುರುತನ್ನು ದೃಢೀಕರಿಸಲು ಮತ್ತು ಡಿಜಿಲಾಕರ್ (DigiLocker) ಮೂಲಕ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು, ಆಧಾರ್, ಪ್ಯಾನ್ ಕಾರ್ಡ್ ಅಥವಾ ಚಾಲನಾ ಪರವಾನಗಿಯನ್ನು ಬಳಸುವಂತೆ ಎನ್ಟಿಎ (NTA) ಅಭ್ಯರ್ಥಿಗಳಿಗೆ ಸಲಹೆ ನೀಡಿದೆ. ಇದನ್ನೂ ಓದಿ: ಬೆಂಗಳೂರಿನ ಖಾತಾದಾರರಿಗೆ ಬಿಗ್ ಶಾಕ್ – ಡೇಂಜರ್ ಝೋನ್ನಲ್ಲಿ 5 ಸಾವಿರ ಇ-ಖಾತಾ